ಮಹಾರಾಷ್ಟ್ರ, ಅ 3 (Daijiworld News/RD): ಜೈಲ್ಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ಸಹೋದರನಿಗೆ ಮಹಾರಾಷ್ಟ್ರದಲ್ಲಿ ಬಿಜೆಪಿ ಮಿತ್ರ ಪಕ್ಷವಾದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಿಂದ ವಿಧಾನಸಭೆಗೆ ಟಿಕೆಟ್ ನೀಡಲಾಗಿದೆ.
ಆಕ್ಟೋಬರ್ 21 ರಂದು ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಗೆ ಬಿಜೆಪಿ, ಶಿವಸೇನಾ ಮತ್ತು ಇತರ ಪ್ರಾದೇಶಿಕ ಪಕ್ಷಗಳು ಸೇರಿ ಸಮ್ಮಿಶ್ರ ಮಾಡಿಕೊಂಡಿವೆ. ಇಂದು ರಾಮದಾಸ್ ಅಠವಾಳೆ ತಮ್ಮ ಪಕ್ಷದ ಕೆಲ ಮುಖಂಡರಿಗೆ ಟಿಕೆಟ್ ಹಂಚಿಕೆ ಮಾಡಿದ್ದು, ಇದರಲ್ಲಿ ಫಾಲ್ಟನ್ ಕ್ಷೇತ್ರದಿಂದ ಛೋಟಾ ರಾಜನ್ ಸಹೋದರ ದೀಪಕ್ ನಿಕಾಲ್ಜೆ ಟಿಕೆಟ್ ನೀಡಿದ್ದಾರೆ. ಹಲವಾರು ವರ್ಷಗಳಿಂದ ರಿಪಬ್ಲಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದಲ್ಲಿ ಗುರುತಿಸಿಕೊಂಡಿರುವ ದೀಪಕ್ ಗೆ ಈ ಹಿಂದೆ ಮುಂಬೈನ ಚೆಂಬೂರಿನಿಂದ ಈ ಪಕ್ಷ ಟಿಕೆಟ್ ನೀಡಿತ್ತು. ಆದರೆ ದೀಪಕ್ ಆ ಚುನಾವಣೆಯಲ್ಲಿ ಸೋತಿದ್ದರು.
ದೀಪಕ್ ನಿಕಾಲ್ಜೆ, 55 ವರ್ಷದ ಭೂಗತ ಪಾತಕಿ ಛೋಟಾ ರಾಜನ್ ಅಲಿಯಾಸ್ ರಾಜೇಂದ್ರ ಸದಾಶಿವ ಅವರ ಸಹೋದರಾನಾಗಿದ್ದು. ಛೋಟಾ ರಾಜನ್ ನೂರಾರು ಹತ್ಯಾ ಪ್ರಕರಣಗಳಲ್ಲಿ ಆರೋಪಿಯಾಗಿದ್ದ, ಭಾರತೀಯ ಪೊಲೀಸರಿಂದ ರೆಡ್ ಕಾರ್ನರ್ ನೋಟಿಸ್ ಪಡೆದು, ವಿವಿಧ ವೇಷ ಧರಿಸಿ ತಲೆಮರೆಸಿಕೊಂಡಿದ್ದ ರಾಜನ್ ನಾನಾ ದೇಶಗಳಿಗೆ ಪರಾರಿಯಾಗಿದ್ದ, ಕೊನೆಗೆ ಸಿಡ್ನಿಯಿಂದ ಬಾಲಿ ಬೀಚ್ ರೆಸಾರ್ಟ್ ನಲ್ಲಿ ಛೋಟಾ ರಾಜನ್ ಅನ್ನು ಇಂಡೋನೇಷ್ಯಾ ಪೊಲೀಸರು ಬಂಧಿಸಿದ್ದರು. ನಂತರ ಆತನನ್ನು ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 8 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.