ಬೆಂಗಳೂರು, ಅ 03 (DaijiworldNews/SM): ಆಶಾ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮಾಸಿಕ ನಿಶ್ಚಿತ ಗೌರವಧನವನ್ನು ಮುಂದಿನ ತಿಂಗಳಿನಿಂದ ಹೆಚ್ಚಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ನವಂಬರ್ ನಿಂದ ತಲಾ 500 ರೂಪಾಯಿಗೆ ಹೆಚ್ಚಿಸಲು ಸರಕಾರ ನಿರ್ಧರಿಸಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಇದರೊಂದಿಗೆ, ನೆರೆ ಪರಿಹಾರಕ್ಕೆ ಪೂರಕವಾಗಿ ಬಜೆಟ್ ಮಂಡಿಸಲು ಕೂಡ ನಿರ್ಧಾರ ಕೈಗೊಳ್ಳಲಾಗಿದೆ.
ರಾಜ್ಯದಲ್ಲಿ ಬಹುತೇಕ ಭಾಗ ನೆರೆಯಿಂದ ಆವೃತಗೊಂಡಿದೆ. ಆದರೆ, ಸರಕಾರಗಳು ಪರಿಹಾರ ವಿತರಿಸಿಲ್ಲ. ಈ ಕಾರಣದಿಂದ ರಾಜ್ಯದೆಲ್ಲೆಡೆ ಜನ ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆ ನೆರೆ ಪರಿಹಾರಕ್ಕೆ ಪೂರಕ ಬಜೆಟ್ ಮಂಡನೆಗೆ ಸಚಿವ ಸಂಪುಟ ನಿರ್ಧರಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ್ ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗಾರರೊಂದಿಗೆ ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಿಂದ ಬಂದ ಮೇಲೆ ರಾಜ್ಯದ ಇಬ್ಬರು ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ಮಾಡಿದ್ದಾರೆ. ಎರಡು ಮೂರು ದಿನದಲ್ಲಿ ಪರಿಹಾರ ಬಿಡುಗಡೆಯಾಗುವ ಆಶಾಭಾವನೆ ಇದೆ ಎಂದರು.
ಇನ್ನು ರಾಜ್ಯದಲ್ಲಿನ ನೆರೆ ಅಧ್ಯಯನಕ್ಕೆ ಕೇಂದ್ರದ ಆರ್ಥಿಕ ಸಚಿವರು, ಗೃಹ ಸಚಿವರುಗಳನ್ನು ಪ್ರಧಾನಿಯವರು ರಾಜ್ಯಕ್ಕೆ ಕಳುಹಿಸಿದ್ದಾರೆ. ಆದರೆ, ಬಿಹಾರಕ್ಕೆ ಯಾರನ್ನೂ ಕಳುಹಿಸಿಲ್ಲ. ಬರೇ ಟ್ವೀಟ್ ಮೂಲಕ ಪರಿಹಾರ ಬಿಡುಗಡೆ ಮಾಡುವುದಾಗಿ ತಿಳಿಸಿದ್ದಾರೆ ಎಂಬುವುದಾಗಿ ಪ್ರಧಾನಿ ನಡೆಯನ್ನು ಅವರು ಸಮರ್ಥಿಸಿಕೊಂಡಿದ್ದಾರೆ.