ತುಮಕೂರು, ಅ.04(Daijiworld News/SS): ರಾಜ್ಯದ ಕುರಿತು ಕೇಂದ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಆರೋಪಿಸಿದ್ದಾರೆ.
ರಾಜ್ಯದ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವ ಕೇಂದ್ರದ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಂಸತ್ತಿನ ಆವರಣದಲ್ಲಿ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್.ಡಿ.ದೇವೇಗೌಡ ಅವರು ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡ ಅವರು, ರಾಜ್ಯದ ಹಿಸಾಸಕ್ತಿ ಹಾಗೂ ರಾಜ್ಯದ ಕುರಿತು ಕೇಂದ್ರ ನಿರ್ಲಕ್ಷ್ಯ ತೋರುತ್ತಿದೆ ಎಂದು ಟೀಕಿಸಿದ್ದಾರೆ.
ಈ ಹಿಂದೆ 2004ರಲ್ಲಿಯೂ ಅಂದಿನ ಮುಖ್ಯಮಂತ್ರಿಯಾಗಿದ್ದ ಎಸ್ಎಂ.ಕೃಷ್ಣ ವಿರುದ್ಧ ಪ್ರತಿಭಟನೆ ನಡೆಸಿದ್ದೆ. ಇದೀಗ ಮತ್ತೆ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸುತ್ತೇನೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಸೋಲು ನನ್ನ ಮೇಲೆ ಯಾವುದೇ ರೀತಿಯ ಪರಿಣಾಮ ಬೀರಿಲ್ಲ. ಗೆಲವು, ಸೋಲು ನನಗೆ ದೊಡ್ಡದೇನಲ್ಲ. ಈ ವರೆಗೂ ನಾನು 15 ಚುನಾವಣೆಗಳನ್ನು ಎದುರಿಸಿದ್ದೇನೆ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋಲು ಕಂಡಲೂ ಪಕ್ಷಕ್ಕೆ ದೊಡ್ಡ ಗೆಲುವು ದೊರಕಿದೆ. ಜೆಡಿಎಸ್'ಗೆ ಮತ್ತೆ ಒಳ್ಳೆಯ ದಿನಗಳು ಬರಲಿದೆ. ನಮ್ಮ ಪಕ್ಷ ಸರ್ಕಾರ ರಚನೆ ಮಾಡಲಿದೆ. ಸರ್ಕಾರ ಯಾವಾಗ ಬೀಳುತ್ತದೆ ಎಂದು ನಾನು ಭವಿಷ್ಯ ಹೇಳಲು ಸಾಧ್ಯವಿಲ್ಲ. ಆದರೆ, ಸರ್ಕಾರ ಬೀಳುವುದಂತೂ ಖಚಿತ ಎಂದು ತಿಳಿಸಿದ್ದಾರೆ.