ಬೆಂಗಳೂರು, ಅ.04(Daijiworld News/SS): ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೂರಿದ್ದಾರೆ.
ನೆರೆ ಸಂತ್ರಸ್ತರಿಗೆ ಪರಿಹಾರ ತರುವಲ್ಲಿ ವಿಫಲಾಗಿರುವ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಿದ್ದರಾಮಯ್ಯ ಅವರು, ನಿಮ್ಮ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎಂದು ಒಪ್ಪಿಕೊಂಡ ಬಳಿಕ ಒಂದು ಕ್ಷಣ ಕೂಡ ಅಧಿಕಾರದಲ್ಲಿ ಮುಂದುವರೆಯುವ ಅರ್ಹತೆ ನಿಮಗಿಲ್ಲ. ದಯವಿಟ್ಟು ರಾಜೀನಾಮೆ ಕೊಟ್ಟು ಹೊರಟುಬಿಡಿ. ನಿಮ್ಮ ಅಸಾಮರ್ಥ್ಯಕ್ಕಾಗಿ ರಾಜ್ಯದ ಜನರನ್ನು ಶಿಕ್ಷಿಸಬೇಡಿ ಎಂದು ಹೇಳಿದ್ದಾರೆ.
ನಿಮ್ಮ ಜಗಳದಲ್ಲಿ ಕರ್ನಾಟಕವನ್ನು ಯಾಕೆ ಬಲಿಕೊಡುತ್ತೀರಿ....? ನೆರೆ ಸಂತ್ರಸ್ತರಿಗೆ ಪರಿಹಾರ ಕೊಡುವ ಯೋಗ್ಯತೆ ಪ್ರಧಾನಿ ಮೋದಿ ಸರ್ಕಾರಕ್ಕಿಲ್ಲ. ನ್ಯಾಯಬದ್ಧ ಪರಿಹಾರ ಕೇಳಿ ವರದಿ ಸಲ್ಲಿಸುವ ಯೋಗ್ಯತೆ ನಿಮಗೂ ಇಲ್ಲ. ಆರ್ಥಿಕವಾಗಿ ಮಾತ್ರವಲ್ಲ, ಬೌದ್ಧಿಕವಾಗಿಯೂ ನಿಮ್ಮ ಸರ್ಕಾರ ದಿವಾಳಿಯಾಗಿದೆ ಎಂದು ತಿಳಿಸಿದ್ದಾರೆ.