ಬೆಂಗಳೂರು, ಅ 04 (DaijiworldNews/SM): ಹಲವಾರು ಆರೋಪ ಪ್ರತ್ಯಾರೋಪಗಳ ಬಳಿಕ ಇದೀಗ ಕೇಂದ್ರ ಸರಕಾರ ರಾಜ್ಯಕ್ಕೆ ಪರಿಹಾರ ಬಿಡುಗಡೆಗೊಳಿಸಿದೆ. ಇದಕ್ಕೆ ರಾಜ್ಯದ ಜನತೆಯ ಪರವಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.
ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿರುವ ಅವರು, ಕರ್ನಾಟಕ ಸರ್ಕಾರ ಅಂದಾಜು ಮಾಡಿದ್ದು ಮೂವತ್ತೆಂಟು ಸಾವಿರ ಕೋಟಿಗೂ ಹೆಚ್ಚು ಹಾನಿ. ಕೇಂದ್ರ ಸರ್ಕಾರದ ಬಳಿ ಕೇಳಿದ ಪರಿಹಾರ ಮೂರು ಸಾವಿರದ ನಾನೂರು ಕೋಟಿ. ಆದರೆ, ಇದೀಗ ಸಾವಿರದಿನ್ನೂರು ಕೋಟಿ ರೂಪಾಯಿ ಬಿಡುಗಡೆ ಮಾಡಲು ಕೇಂದ್ರ ಒಪ್ಪಿಗೆ ಸೂಚಿಸಿದೆ ಎಂದು ಅವರು ತಿಳಿಸಿದ್ದಾರೆ.