ನವದೆಹಲಿ, ಅ.05(Daijiworld News/SS): ಡ್ರೋಣ್ ಮೂಲಕ ಪಾಕ್ ಶಸ್ತ್ರಾಸ್ತ್ರ ರವಾನೆ ಮಾಡುತ್ತಿದ್ದು, ಈ ಪ್ರಕರಣವನ್ನು ಪಂಜಾಬ್ ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ದಳದ ವಶಕ್ಕೆ ನೀಡಲು ನಿರ್ಧರಿಸಿದೆ ಎಂದು ತಿಳಿದುಬಂದಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ 370ನೇ ವಿಧಿ ರದ್ದು ಪಡಿಸಿದ ಬಳಿಕ ಪಾಕಿಸ್ತಾನ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಹೊಂಚು ಹಾಕುತ್ತಿದೆ. ಇದರಂತೆ ಪಂಜಾಬ್ ರಾಜ್ಯದ ವಿವಿಧೆಡೆ ಪಾಕಿಸ್ತಾನ ಡ್ರೋಣ್ ಮೂಲಕ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ರವಾನಿಸುತ್ತಿದೆ. ಪಾಕಿಸ್ತಾನ ಮತ್ತು ಜರ್ಮನಿ ಬೆಂಬಲಿತ ಖಲಿಸ್ತಾನ್ ಜಿಂದಾಬಾದ್ ಫೋರ್ಸ್ (ಕೆಜೆಎಫ್) ಉಗ್ರರ ಅಡಗುತಾಣಗಳ ಮೇಲೆ ರಾಜ್ಯ ಪೊಲೀಸರು ದಾಳಿ ನಡೆಸಿದ ಬಳಿಕ ಪಂಬಾಜ್ ರಾಜ್ಯದಲ್ಲಿ ಪಾಕಿಸ್ತಾನ ಡ್ರೋಣ್ ಮೂಲಕ ಶಸ್ತ್ರಾಸ್ತ್ರ ಹಾಗೂ ಮದ್ದುಗುಂಡುಗಳನ್ನು ರವಾನೆ ಮಾಡುತ್ತಿದೆ.
ಇದೀಗ ಈ ಪ್ರಕರಣವನ್ನು ಎನ್ಐಎ ವಶಕ್ಕೆ ನೀಡಲು ಕೇಂದ್ರ ಚಿಂತನೆ ನಡೆಸುತ್ತಿದೆ. ಮಾತ್ರವಲ್ಲ, ಶೀಘ್ರದಲ್ಲಿಯೇ ಉಗ್ರ ನಿಗ್ರಹ ದಳ ಪ್ರಕರಣವನ್ನು ದಾಖಲಿಸಿಕೊಳ್ಳಲಿದೆ ಎಂದು ವರದಿಗಳು ತಿಳಿಸಿವೆ.