ಶ್ರೀನಗರ, ಅ 5 (Daijiworld News/RD): ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಮೇಲೆ ಉಗ್ರರು ಗ್ರೈನೇಡ್ ದಾಳಿ ನಡೆಸಿದ್ದು ಇದರ ಪರಿಣಾಮ 10 ಮಂದಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆಯಲ್ಲಿ ಹತ್ತು ಮಂದಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.
ಅನಂತ್ ನಾಗ್ ಜಿಲ್ಲೆಯಲ್ಲಿನ ಉಪಜಿಲ್ಲಾಧಿಕಾರಿ ಕಚೇರಿಯ ಹೊರಭಾಗದಲ್ಲಿ ಪಹರೆ ನಡೆಸುತ್ತಿದ್ದ ಭದ್ರತಾ ಸಿಬ್ಬಂದಿಗಳ ಮೇಲೆ ಭಯೋತ್ಪಾದಕರು ಗ್ರೆನೇಡ್ ದಾಳಿ ನಡೆಸಿರುವುದಾಗಿ ಮೂಲಗಳು ವರದಿ ಮಾಡಿದೆ. ಆದರೆ ಉಗ್ರರು ಎಸೆದ ಗ್ರೆನೇಡ್ ರಸ್ತೆ ಸಮೀಪ ಬಿದ್ದು ಸ್ಫೋಟಿಸಿದ್ದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಗ್ರೆನೇಡ್ ದಾಳಿಯಲ್ಲಿ 12 ವರ್ಷದ ಬಾಲಕ ಸೇರಿದಂತೆ 10 ಮಂದಿ ಗಾಯಗೊಂಡಿದ್ದಾರೆ.
ಗ್ರೈನೇಡ್ ದಾಳಿ ಸದ್ಯ ಜನರಲ್ಲಿ ಆತಂಕ ಮೂಡಿಸಿದೆ. ಇನ್ನು ಘಟನಾ ಸ್ಥಳದ ಸುತ್ತ ಭದ್ರತಾ ಪಡೆಗಳು ಸುತ್ತುವರೆದಿದ್ದು ಉಗ್ರರ ವಿರುದ್ಧ ಕಾರ್ಯಾಚರಣೆ ಕೈಗೊಂಡಿದ್ದಾರೆ.