ಚೆನ್ನೈ, ಅ 6 (Daijiworld News/RD):ತಲೆ ಮೇಲೆ ಬ್ಯಾನರ್ ಬಿದ್ದು ಟೆಕ್ಕಿ ಶುಭಶ್ರೀ ರವಿ ಮೃತಪಟ್ಟಿದ್ದು, ಬ್ಯಾನರ್ ಬೀಳಲು ಗಾಳಿ ಕಾರಣ ಹೀಗಾಗಿ ಗಾಳಿಯ ಮೇಲೆ ಪ್ರಕರಣ ದಾಖಲಿಸಿ ಎಐಎಡಿಎಂಕೆ ಮುಖಂಡ ಸಿ. ಪೊನ್ನಯನ್ ಹೇಳಿಕೆ ನೀಡಿದ್ದಾರೆ.
ಎಐಎಡಿಎಂಕೆ ನಾಯಕ ಹಾಗೂ ಮಾಜಿ ಕೌನ್ಸಿಲರ್ ಜಯಗೋಪಾಲ್ ಅವರು ತಮ್ಮ ಪುತ್ರನ ಮದುವೆಗಾಗಿ ಅಳವಡಿಸಿದ್ದ ಬ್ಯಾನರ್ ಕುಸಿದುಬಿದ್ದು ಶುಭಶ್ರೀ ಮೃಪಟ್ಟಿದ್ದರು. ಶುಭಶ್ರೀ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಬ್ಯಾನರ್ ಕುಸಿ ಬಿದ್ದ ಪರಿಣಾಮ ಶುಭಶ್ರೀ ಗಾಯಗೊಂಡು ಕೆಳಗೆ ಬಿದ್ದಿದ್ದರು. ಇದೇ ವೇಳೆ ಹಿಂಬದಿಯಿಂದ ಬರುತ್ತಿದ್ದ ಲಾರಿಯೊಂದು ಯುವತಿಯ ಮೇಲೆ ಹರಿದು ಸ್ಥಳದಲ್ಲೇ ಮೃತಪಟ್ಟಿದ್ದರು.
ಹೀಗಾಗಿ ಅನುಮತಿ ಪಡೆಯದೇ ಬ್ಯಾನರ್ ಹಾಕಿದ ಆರೋಪದ ಮೇಲೆ ಜಯಗೋಪಾಲ್ ಅವರ ವಿರುದ್ಧ ಪೊಲೀಸ್ ಕೇಸ್ ದಾಖಲಿಸಿದ್ದಾರೆ.
ಮದ್ರಾಸ್ ಹೈಕೋರ್ಟ್ ಘಟನೆಯ ಕುರಿತು ತನಿಖೆಗೆ ಆದೇಶಿಸಿದೆ ಮತ್ತು ಮೃತ ಯುವತಿಯ ಪೋಷಕರಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ತಮಿಳುನಾಡು ಸರ್ಕಾರ ಆದೇಶ ನೀಡಿತ್ತು.