ಬೆಂಗಳೂರು, ಅ.07(Daijiworld News/SS): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ವಿಪಕ್ಷ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿಯವರು ಹೇಳಿದ್ದಾರೆ.
ಪಕ್ಷದ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿಯವರು ನಡೆಸಿದ್ದ ಸಭೆಯಲ್ಲಿ ಭಾಗಿಯಾದ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ವಿಧಾನಸಭೆ ವಿರೋಧ ಪಕ್ಷ ನಾಯಕರ ಆಯ್ಕೆ ಕುರಿತ ಚರ್ಚೆ ಪ್ರಗತಿಯಲ್ಲಿದೆ. ಸಭೆಯಲ್ಲಿ ವಿರೋಧ ಪಕ್ಷದ ನಾಯಕರ ಆಯ್ಕೆ ಕುರಿತಂತೆ ಬಹುತೇಕ ಚರ್ಚೆ ನಡೆಯಿತು. ಸಿದ್ದರಾಮಯ್ಯ ಹಾಗೂ ಹೆಚ್.ಕೆ ಪಾಟೀಲ್ ಇಬ್ಬರೂ ರೇಸ್'ನಲ್ಲಿದ್ದಾರೆ. ಸಿದ್ದರಾಮಯ್ಯ ಅವರೇ ವಿರೋಧ ಪಕ್ಷದ ನಾಯಕರಾಗುವ ಎಲ್ಲಾ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.
ಶೀಘ್ರದಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡಲಾಗುತ್ತದೆ. ಈ ಕುರಿತು ಶಾಸಕರು ಹಾಗೂ ಎಂಎಲ್'ಸಿಗಳೊಂದಿಗೆ ಚರ್ಚೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ