ಮುಂಬೈ, ಅ 7 (Daijiworld News/RD): ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯು ಅಕ್ಟೋಬರ್ 21 ರಂದು ನಡೆಯಲಿದ್ದು, ಎರಡನೇ ಬಾರಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ನೇತೃತ್ವದ ಮಹಾ ಮೈತ್ರಿಕೂಟ ಸಿದ್ದವಾಗಿದ್ದು, ಪ್ರಚಾರಕ್ಕೆ ಭರದ ಸಿದ್ಧತೆ ನಡೆಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅಖಾಡಕ್ಕೆ ಇಳಿಯಲಿದ್ದಾರೆ.
ಅಕ್ಟೋಬರ್ 9 ರಂದು ಪ್ರಧಾನಿ ಮೋದಿ ಪ್ರಚಾರ ಕಾರ್ಯಕ್ರಮ ಕೈಗೊಳ್ಳಲಿದ್ದು, ಮತ್ತು ಅಕ್ಟೋಬರ್ 18 ರಂದು ಕೇಂದ್ರ ಗೃಹ ಸಚಿವ ಅಮಿತ್ 18 ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.
ಅಕ್ಟೋಬರ್ 17 ರಂದು ಪುಣೆ ಹಾಗೂ ಸಾತಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಹೇಳಿದ್ದಾರೆ.
ಎನ್ ಡಿಎ ಮೈತ್ರಿಕೂಟ ಕಾಂಗ್ರೆಸ್- ಎಸ್ ಸಿಪಿ ನೇತೃತ್ವದ ಮೈತ್ರಿಕೂಟವನ್ನು ಚುನಾವಣೆಯಲ್ಲಿ ಸೋಲಿಸಲು ಪಕ್ಷಗಳು ಕಸರತ್ತು ಮಾಡುತ್ತಿವೆ.