ನವದೆಹಲಿ, ಅ 07 (DaijiworldNews/SM): ಸ್ವಿಜ್ ಬ್ಯಾಂಕ್ ನಲ್ಲಿ ಭಾರತೀಯರು ಹೊಂದಿರುವ ಹಣದ ಬಗ್ಗೆ ಮಾಹಿತಿ ಸ್ವಿಜರ್ಲ್ಯಾಂಡ್ ಸರಕಾರ ನೀಡಿದೆ. ಇದು ಭಾರತೀಯ ಸರಕಾರದ ಹೋರಾಟಕ್ಕೆ ಸಿಕ್ಕಿರುವ ಮೊದಲ ಹಂತದ ಜಯವಾಗಿದೆ. ಭಾರತ-ಸ್ವಿಡ್ಜರ್ಲ್ಯಾಂಡ್ ಹೊಸ ಒಪ್ಪಂದದಡಿಯಲ್ಲಿ ಭಾರತೀಯರ ಸ್ವಿಸ್ ಬ್ಯಾಂಕ್ ಖಾತೆಯ ವಿವರ ಪಡೆದುಕೊಂಡಿದೆ.
ಎಇಒಐನಲ್ಲಿ ಜಾಗತಿಕ ಮಾನದಂಡಗಳ ಚೌಕಟ್ಟಿನೊಳಗೆ ಸ್ವಿಡ್ಜರ್ಲ್ಯಾಂಡ್ ಫೆಡರಲ್ ಟ್ಯಾಕ್ಸ್ ಅಡ್ಮಿನಿಸ್ಟ್ರೇಷನ್ ಹಣಕಾಸು ಖಾತೆಗಳ ಮಾಹಿತಿಯನ್ನು ವಿನಿಮಯ ಮಾಡಿಕೊಂಡ 75 ದೇಶಗಳಲ್ಲಿ ಭಾರತವೂ ಸೇರಿದೆ ಎಂದು ತಿಳಿಸಿದ್ದಾರೆ.
ಎಇಒಐ ಚೌಕಟ್ಟಿನಡಿಯಲ್ಲಿ ಭಾರತವು ಮೊದಲ ಬಾರಿಗೆ ಸ್ವಿಸ್ ಅಧಿಕಾರಿಗಳಿಂದ ವಿವರಗಳನ್ನು ಪಡೆದುಕೊಂಡಿದೆ. ಇದು ಹಣಕಾಸು ಖಾತೆಗಳ ಮಾಹಿತಿ ವಿನಿಮಯವಾಗಿರಲಿದ್ದು 2018 ರಲ್ಲಿ ರದ್ದಾಗಿರುವ ಖಾತೆಗಳ ಮಾಹಿತಿ ಸಹ ಇವುಗಳ ಜತೆಗೆ ಲಭ್ಯವಾಗಲಿದೆ.