ನವದೆಹಲಿ, ಅ.08(Daijiworld News/SS): ಈರುಳ್ಳಿಯ ಉತ್ಪಾದನೆಯಲ್ಲಿ ಎರಡನೇ ಸ್ಥಾನ ಹೊಂದಿರುವ ರಾಜ್ಯದಲ್ಲಿಯೇ ಈರುಳ್ಳಿ ಬೆಲೆ ಕೆಲ ದಿನಗಳ ಹಿಂದೆ ಗಗನಕ್ಕೇರಿತ್ತು. ಆದರೆ ಇದೀಗ ಕೇಂದ್ರ ಸರಕಾರ ತೆಗೆದುಕೊಂಡ ಹಲವು ಕಟ್ಟುಪಾಡುಗಳ ಪರಿಣಾಮ ದೆಹಲಿ ಮತ್ತು ದೇಶದ ಇತರೆ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಗಣನೀಯವಾಗಿ ಕಡಿಮೆಯಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಒಂದು ಹಂತದಲ್ಲಿ ಕರ್ನಾಟಕದಲ್ಲಿ ಈರುಳ್ಳಿ ದರ 70 ರೂಪಾಯಿಗೆ ಏರಿಕೆಯಾಗಿತ್ತು. ಆದರೆ ಇದೀಗ ರಾಜ್ಯದಲ್ಲಿ ಈರುಳ್ಳಿ ಬೆಲೆ 35 ರಿಂದ 45 ರೂಪಾಯಿಗೆ ಕುಸಿದಿದೆ.
ಈರುಳ್ಳಿ ಕಾಪು ದಾಸ್ತಾನುಗಾರರ ಮೇಲೆ ತೆಗೆದುಕೊಂಡ ಕಟ್ಟುನಿಟ್ಟಿನ ಕ್ರಮ ಮತ್ತು ಹೊರದೇಶಗಳಿಗೆ ರಫ್ತು ಮಾಡದಂತೆ ಹಾಕಿದ ಹಲವು ಬಿಗಿ ಕ್ರಮಗಳಿಂದ ದೆಹಲಿ ಮತ್ತು ಹೈದರಾಬಾದ್ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಈರುಳ್ಳಿ ಬೆಲೆ ಕಡಿಮೆಯಾಗಿದೆ ಎನ್ನಲಾಗಿದೆ.
ಅತಿವೃಷ್ಟಿ ಹಾಗೂ ಅನಾವೃಷ್ಟಿಯಿಂದಾಗಿ ಬೆಳೆ ಕುಂಠಿತವಾಗಿರುವ ಪರಿಣಾಮ ಈರುಳ್ಳಿ ಬೆಲೆ ಗಗನಕ್ಕೇರಿತ್ತು. ಈ ಬದಲಾವಣೆ ಗ್ರಾಹಕರಿಗೆ ಕಣ್ಣೀರು ತರಿಸಿತ್ತು.