ನವದೆಹಲಿ, ಅ.09(Daijiworld News/SS): ಭಿನ್ನಮತವನ್ನು ಗೌರವಿಸುವ ಕುರಿತು ಪ್ರಧಾನಿ ತಮ್ಮ ಸ್ಪಷ್ಟ ನಿಲುವನ್ನು ದೇಶದ ಮುಂದೆ ಬಹಿರಂಗಪಡಿಸಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಒತ್ತಾಯಿಸಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಗುಂಪು ಹಲ್ಲೆ ಹಿಂಸಾಚಾರಗಳ ಬಗ್ಗೆ ಬಹಿರಂಗಪತ್ರ ಬರೆದ 49 ಮಂದಿ ಸೆಲೆಬ್ರೆಟಿಗಳ ವಿರುದ್ದ ಪ್ರಕರಣ ದಾಖಲಿಸಿರುವ ಕ್ರಮವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ವಿರೋಧಿಸಿದ್ದಾರೆ. ಮಾತ್ರವಲ್ಲ, ಈ ಸಂಬಂಧ ತಮ್ಮ ಅಸಮಾಧಾನ ವ್ಯಕ್ತಪಡಿಸಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡು ಪುಟಗಳ ಬಹಿರಂಗಪತ್ರ ಬರೆದಿದ್ದಾರೆ.
ಪ್ರಧಾನಿ ಮತ್ತು ಸರ್ಕಾರದ ವಿರುದ್ಧ ಟೀಕೆಗಳು ಎದುರಾದಾಗ ಭಿನ್ನಾಭಿಪ್ರಾಯಗಳ ವಿಷಯದಲ್ಲಿ ತಾನು ಅಭಿವ್ಯಕ್ತಿ ಸ್ವಾತಂತ್ರ್ಯ ಕಾಪಾಡಲು ಬದ್ಧನಾಗಿರುತ್ತೇನೆ ಅಂತಾ ದೇಶಕ್ಕೆ ಭರವಸೆ ನೀಡಬೇಕು ಎಂದು ಹೇಳಿದ್ದಾರೆ.