ಬೆಂಗಳೂರು, ಅ.09(Daijiworld News/SS): ಸಿಸಿಬಿ ಅಧಿಕಾರಿಗಳು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿದ್ದು, ಈ ವೇಳೆ ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.
ಜೈಲಿನಲ್ಲಿ ಕೈದಿಗಳು ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಸಿಸಿಬಿ ಅಧಿಕಾರಿಗಳು ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ದಾಳಿ ವೇಳೆ ಜೈಲಿನಲ್ಲಿ 37 ಚಾಕುಗಳು, ಕಠಾರಿ, ಗಾಂಜಾ ಹಾಗೂ ಗಾಂಜಾ ಸೇವನೆ ಮಾಡುವ ಕೊಳವೆಗಳು, ಮೊಬೈಲ್ ಸಿಮ್ ಕಾರ್ಡ್ ಪತ್ತೆಯಾಗಿವೆ. ಅವುಗಳನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇದೀಗ ಪರಪ್ಪನ ಅಗ್ರಹಾರ ಜೈಲಿನಲ್ಲಿ ಗಾಂಜಾ ಹಾಗೂ ಮಾರಕ ಅಸ್ತ್ರಗಳು ಪತ್ತೆಯಾದ ಬಗ್ಗೆ ಅನುಮಾನ ಮೂಡಿಸಿದೆ.