ಬೆಂಗಳೂರು, ಅ.10(Daijiworld News/SS): ಸರ್ಕಾರದ ನಿರ್ಧಾರದ ವರುದ್ಧ ನಾವು ಸದನದಲ್ಲಿ ಹೋರಾಟ ಮಾಡುತ್ತೇನೆ. ಮಾಧ್ಯಮಕ್ಕೆ ನಿರ್ಬಂಧ ಹಾಕಿರುವುದನ್ನು ಕಲಾಪದಲ್ಲಿ ಪ್ರಶ್ನಿಸುತ್ತೇವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹೇಳಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿದ ಅವರು, ವಿಧಾನಸೌಧದಲ್ಲಿ ಮಾಧ್ಯಮಕ್ಕೆ ನಿರ್ಬಂಧ ವಿಧಿಸಿರುವುದು, ಮಾಧ್ಯಮ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ. ಸರ್ಕಾರ ಈ ನಿರ್ಧಾರ ತೆಗೆದುಕೊಂಡಿರುವುದು ಸರಿಯಲ್ಲ. ಸರ್ಕಾರದ ನಿರ್ಧಾರದ ವರುದ್ಧ ನಾವು ಸದನದಲ್ಲಿ ಹೋರಾಟ ಮಾಡುತ್ತೇನೆ. ಮಾಧ್ಯಮಕ್ಕೆ ನಿರ್ಬಂಧ ಹಾಕಿರುವುದನ್ನು ಕಲಾಪದಲ್ಲಿ ಪ್ರಶ್ನಿಸುತ್ತೇವೆ ಎಂದು ತಿಳಿಸಿದ್ದಾರೆ.
ನಮ್ಮ ಸಂಸ್ಥೆ ಮೇಲೆ ಐಟಿ ದಾಳಿ ಮಾಡಲಿ ಸಂತೋಷ. ನಮ್ಮ ತಪ್ಪುಗಳಿದ್ದರೆ ದಾಳಿ ಮಾಡಲಿ. ಸರ್ಕಾರದ ಬೊಕ್ಕಸದಲ್ಲಿ ಹಣ ಇಲ್ಲ ಅಂತ ಹೇಳಲಾಗುತ್ತಿದೆ. ಆದರೇ ಬೇಕಾದಷ್ಟು ಹಣ ಇದೆ. ಅಷ್ಟಿದ್ದರೆ ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.
ಲೋಕೋಪಯೋಗಿ ಇಲಾಖೆಯಿಂದ ಕೈಗೊಳ್ಳಲಾಗಿರುವ ಕೆಲ ಯೋಜನೆಗಳನ್ನು ಈ ಸರಕಾರ ತಡೆಹಿಡಿದಿರುವುದು ಸರಿಯಲ್ಲ. ಸರ್ಕಾರದಿಂದ ಆದೇಶ ಆಗಿರುವ ಯೋಜನೆ ತಡೆಹಿಡಿಯಲು ಸಾಧ್ಯವಿಲ್ಲ. ರಾಜ್ಯದ ಬೊಕ್ಕಸದಲ್ಲಿ ಹಣವಿಲ್ಲವೆಂದು ಕೆಲ ಸಚಿವರುಗಳು ಹೇಳಿಕೆ ನೀಡಿದ್ದಾರೆ. ಹಾಗಿದ್ದರೆ ರಾಜ್ಯ ಸರಕಾರದ ಹಣಕಾಸಿನ ಸ್ಥಿತಿಗತಿ ಬಗ್ಗೆ ಕೂಡಲೇ ಶ್ವೇತ ಪತ್ರ ಹೊರಡಿಸಿ, ಹಣ ಏನಾಯಿತು ಎಂಬ ಬಗ್ಗೆ ಮಾಹಿತಿ ನೀಡುವಂತೆ ಒತ್ತಾಯಿಸಿದರು.
ನಾನು ವಿರೋಧ ಪಕ್ಷ ನಾಯಕ ಸ್ಥಾನದ ಆಕಾಂಕ್ಷಿಯಾಗಿರಲಿಲ್ಲ. ಹೈಕಮಾಂಡ್ ಯಾವ ರೀತಿಯ ತೀರ್ಮಾನ ತೆಗೆದುಕೊಳ್ಳುತ್ತದೆ ಅದಕ್ಕೆ ನಾನು ಬದ್ದನಾಗಿದ್ದೇನೆ. ಸಿದ್ದರಾಮಯ್ಯ ಸಮರ್ಥರಾಗಿದ್ದಾರೆ. ಹಿಂದೆ ಕೂಡ ವಿಪಕ್ಷ ನಾಯಕರಾಗಿದ್ದವರು, ಮುಖ್ಯಮಂತ್ರಿಯಾಗಿದ್ದವರು. ಹಾಗಾಗಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.