ಶ್ರೀನಗರ, ಅ.11(Daijiworld News/SS): ಜಮ್ಮು ಕಾಶ್ಮೀರದ ಪರಿಸ್ಥಿತಿ ಈಗ ಬಹುತೇಕ ಸಹಜ ಸ್ಥಿತಿಗೆ ಮರಳಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ನೀಡಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಇದೀಗ ಜಮ್ಮು ಕಾಶ್ಮೀರ ಮತ್ತೆ ಪ್ರವಾಸಿಗರನ್ನು ಸ್ವಾಗತಿಸಲು ಸಜ್ಜಾಗಿದೆ.
ಜಮ್ಮು ಕಾಶ್ಮೀರಕ್ಕೆ ನೀಡಲಾಗಿದ್ದ 370ನೇ ವಿಧಿಯ ರದ್ದತಿಗೆ ಮಹತ್ವದ ಕ್ರಮ ಕೈಗೊಳ್ಳುವ ಮುನ್ನ ಆಗಸ್ಟ್ 2ನೇ ತಾರೀಖಿನಂದು ಪ್ರವಾಸಿಗರಿಗೆ ನೀಡಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಭದ್ರತಾ ದೃಷ್ಠಿಯಿಂದ ಜಮ್ಮು ಕಾಶ್ಮೀರಕ್ಕೆ ಭೇಟಿ ನೀಡಬಾರದು ಎಂದು ಆಗ ಪ್ರವಾಸಿಗರಿಗೆ ತುರ್ತು ಆದೇಶ ನೀಡಲಾಗಿತ್ತು.
ಭದ್ರತಾ ದೃಷ್ಟಿಯಿಂದ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಲಾಗಿತ್ತು. ಈಗ ಅದನ್ನು ತೆರವು ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಾತ್ರವಲ್ಲ, ಕಳೆದ ಕೆಲವು ತಿಂಗಳುಗಳಿಂದ ಜಮ್ಮು ಕಾಶ್ಮೀರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದರೂ ಸಂಪೂರ್ಣ ಹತೋಟಿಯಲ್ಲಿತ್ತು ಎಂದು ಪೊಲೀಸ್ ಅಧಿಕಾರಿಗಳು ಹಾಗೂ ಸೇನಾಧಿಕಾರಿಗಳು ಹೇಳಿದ್ದಾರೆ.