ಬೆಂಗಳೂರು, ಅ 12 (Daijiworld News/MSP): ಐಟಿ ದಾಳಿ ಬೆನ್ನಲ್ಲೇ ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಆಪ್ತ ಸಹಾಯಕ ರಮೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಸಾಯಿ ಗ್ರೌಂಡ್ ಬಳಿ ಮರಕ್ಕೆ ನೇಣು ಬಿಗಿದುಕೊಂಡು ರಮೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಅವರ ಮನೆ ಮೇಲೆ ಐಟಿ ದಾಳಿ ನಡೆಯುತ್ತಿದ್ದಂತೆ, ಆಪ್ತ ಸಹಾಯಕ ರಮೇಶ್ ಮನೆ ಮೇಲೆ ದಾಳಿ ನಡೆದಿತ್ತು. ಈ ಸಂದರ್ಭ ರಮೇಶ್ ಮೊಬೈಲ್ ಸ್ವೀಚ್ ಆಫ್ ಮಾಡಿ ಮನೆಯಿಂದ ತಪ್ಪಿಸಿಕೊಂಡಿದ್ದ.
ಇದಕ್ಕೂ ಮುನ್ನ ತಮ್ಮ ಇಬ್ಬರು ಆಪ್ತರಿಗೆ ಕರೆ ಮಾಡಿದ್ದ ರಮೇಶ್ ನಾನು ಬಡವನಾಗಿದ್ದು, ಐಟಿ ವಿಚಾರಣೆ ಎದುರಿಸುವ ಶಕ್ತಿ ನನ್ನಲಿಲ್ಲ. ನಾನು ನಿಯತ್ತಿನಿಂದ ಬದುಕಿದ್ದವನುಎಂದು ಹೇಳಿ ಮತ್ತೆ ಮೊಬೈಲ್ ಸ್ವೀಚ್ ಆಫ್ ಮಾಡಿದ್ದರು ಎಂದು ತಿಳಿದುಬಂದಿದೆ.
ಆತ್ಮಹತ್ಯೆ ಮಾಡಿಕೊಂಡ ರಮೇಶ್ ಕುಣಿಗಲ್ ಮೂಲದವರಾಗಿದ್ದು, ಕೆಲವು ವರ್ಷ ಕೆಪಿಸಿಸಿಯಲ್ಲಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಪರಮೇಶ್ವರ್ ಅವರ ಪಿಎ ಆಗಿದ್ದರು.