ನವದೆಹಲಿ, ಅ 13 (DaijiworldNews/SM): ಪ್ರತಿಪಕ್ಷಗಳ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ತಾಕತ್ತಿದ್ದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ರದ್ದು ಪಡಿಸಿರುವ 370ನೇ ವಿಧಿಯನ್ನು ಮರಳಿ ಜಾರಿಗೊಳಿಸುತ್ತೇವೆಂದು ಹೇಳಿ ಎಂಬುವುದಾಗಿ ಸವಾಲೆಸೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರದ 370, 35ಎ ವಿಧಿ ರದ್ದುಗೊಳಿಸಿದೆ. ಇದನ್ನು ಮತ್ತೆ ಜಾರಿಗೆ ತೆರುತ್ತೇವೆ ಎಂದು ತಮ್ಮ ಪ್ರಣಾಳಿಕೆಯಲ್ಲಿ ಹೇಳುವಂತೆ ಸವಾಲೆಸೆದಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಆದಷ್ಟು ಬೇಗ ಸಹಜ ಸ್ಥಿತಿಗೆ ಮರಳಲಿದೆ. ಇದಕ್ಕಾಗಿ ಕೇಂದ್ರ ಸರಕಾರ ನಿರಂತರ ಶ್ರಮಿಸುತ್ತಿದೆ. ಮುಂದಿನ ಮೂರು ನಾಲ್ಕು ತಿಂಗಳೊಳಗೆ ಸಹಜ ಸ್ಥಿತಿಗೆ ಮರಳಲಿದೆ ಎಂದರು.
ಇನ್ನು ಈಗಾಗಲೇ ಕೇಂದ್ರ ಸರಕಾರ ಜಮ್ಮು ಕಾಶ್ಮೀರದಲ್ಲಿದ್ದ ವಿಶೇಷ ಸ್ಥಾನಮಾನದ 370ನೇ ವಿಧಿಯನ್ನು ರದ್ದುಗೊಳಿಸಿದೆ. ಇದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಈ ಕಾರಣದಿಂದಾಗಿ ಪ್ರಧಾನಿ ಮೋದಿ ಪ್ರತಿಪಕ್ಷಗಳ ಕಾಲೆಳೆದಿದ್ದಾರೆ.