ನವದೆಹಲಿ, ಅ.14(Daijiworld News/SS): ಇಡಿ ವಿಶೇಷ ನ್ಯಾಯಾಲಯ ಜಾಮೀನು ರದ್ದು ಮಾಡಿದ್ದ ಆದೇಶ ಪ್ರಶ್ನಿಸಿ ಡಿ.ಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಹೈಕೋರ್ಟ್ ಮತ್ತೆ ಕೈಗೆತ್ತಿಕೊಳ್ಳಲಿದೆ.
ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟಾ ನೇತೃತ್ವದ ಏಕ ಸದಸ್ಯ ಪೀಠ ತೀರ್ಪು ನೀಡಲಿದೆ. ಈ ಹಿಂದೆಯೇ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ದಸರಾ ಹಬ್ಬದ ಕಾರಣ ಮುಂದೂಡಲಾಗಿತ್ತು. ಇದೀಗ ಅಕ್ರಮ ಹಣ ಪತ್ತೆ ಪ್ರಕರಣದಲ್ಲಿ ತಿಹಾರ್ ಜೈಲುಪಾಲಾಗಿರುವ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಇಂದು ಹೈಕೋರ್ಟ್ನಲ್ಲಿ ನಡೆಯಲಿದೆ.
ಸೆ. 4ರಿಂದಲೂ ಜಾರಿ ನಿರ್ದೇಶನಾಲಯದ ವಿಚಾರಣೆ ಎದುರಿಸುತ್ತಿರುವ ಡಿಕೆ ಶಿವಕುಮಾರ್ ಅವರನ್ನು ನ್ಯಾಯಾಂಗ ಕಸ್ಟಡಿಗೆ ಒಳಪಡಿಸಲಾಗಿದೆ. ಅವರಿಗೆ ಜಾಮೀನು ಸಿಗುವವರೆಗೂ ಡಿಕೆಶಿ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲೇ ಮುಂದುವರಿಯಬೇಕಿದೆ. ತಿಹಾರ್ ಜೈಲಿನಲ್ಲಿರುವ ಡಿಕೆ ಶಿವಕುಮಾರ್ ಎಷ್ಟೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದರು ನ್ಯಾಯಲಯ ತಿರಸ್ಕರಿಸುತ್ತಲೇ ಬಂದಿದೆ.