ನವದೆಹಲಿ, ಅ 14 (DaijiworldNews/SM): ಭಾರತೀಯ ಮೂಲದ ಅಭಿಜಿತ್ ಬ್ಯಾನರ್ಜಿ ಸೇರಿದಂತೆ ಮೂವರು ಅರ್ಥಶಾಸ್ತ್ರಜ್ಞರು ಈ ಸಾಲಿನ ಪ್ರತಿಷ್ಠಿತ ನೊಬೆಲ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಜಾಗತಿಕ ಬಡತನವನ್ನು ಹೋಗಲಾಡಿಸುವ ಪ್ರಾಯೋಗಿಕ ವಿಧಾನ ಮಂಡಿಸಿದ್ದ ಅಭಿಜಿತ್ ಅವರಿಗೆ ಈ ಪುರಸ್ಕಾರ ಲಭಿಸಿದೆ.
2019ರ ಅರ್ಥಶಾಸ್ತ್ರ ನೊಬೆಲ್ ಪ್ರಶಸ್ತಿಗೆ ಅಭಿಜಿತ್ ಬ್ಯಾನರ್ಜಿ, ಎಸ್ತರ್ ಡುಫ್ಲೋ ಮತ್ತು ಮೈಕೆಲ್ ಕ್ರೆಮರ್ ಅವರು ಪಡೆದುಕೊಂಡಿದ್ದಾರೆ. ಇನ್ನು ಈ ಮೂವರನ್ನು ಆಯ್ಕೆ ಮಾಡಿರುವ ಬಗ್ಗೆ ನೊಬೆಲ್ ಆಯ್ಕೆ ಸಮಿತಿ ಪ್ರತಿಕ್ರಿಯೆ ನೀಡಿದ್ದು, 2019ರ ಅರ್ಥಶಾಸ್ತ್ರ ನೊಬೆಲ್ ವಿಜೇತರು ನಡೆಸಿದ ಸಂಶೋಧನೆಯು ಜಾಗತಿಕ ಬಡತನದ ವಿರುದ್ಧ ಹೋರಾಡುವ ನಮ್ಮ ಸಾಮರ್ಥ್ಯವನ್ನು ಗಣನೀಯವಾಗಿ ಸುಧಾರಿಸಿದೆ.
ಕೇವಲ ಎರಡು ದಶಕಗಳಲ್ಲಿ, ಅವರ ಹೊಸ ಪ್ರಯೋಗ ಆಧರಿಸಿದ ವಿಧಾನವು ಅಭಿವೃದ್ಧಿ ಅರ್ಥಶಾಸ್ತ್ರದ ಕಲ್ಪನೆಯನ್ನು ಬದಲಿಸಿದೆ. ಇದೀಗ ಆ ಕ್ಷೇತ್ರ ಮತ್ತಷ್ಟು ಬೆಳವಣಿಗೆ ಸಾಧಿಸುವತ್ತ ಹೊರಟಿದೆ ಎಂಬುವುದಾಗಿ ತಿಳಿಸಿದೆ.