ನವದೆಹಲಿ, ಅ 15 (DaijiworldNews/SM): ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿ ಬಂಧಿಸಲ್ಪಟ್ಟು ತಿಹಾರ ಜೈಲು ಪಾಲಾಗಿರುವ ಕಾಂಗ್ರೆಸ್ ಮುಖಂಡಡಿಕೆ ಶಿವಕುಮಾರ್ ಅವರ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆಯಾಗಿದೆ.
ಜಾಮೀನು ಅರ್ಜಿ ವಿಚಾರಣೆಯನ್ನು ಮಂಗಳವಾರಕ್ಕೆ ಮುಂದೂಡಲಾಗಿತ್ತು. ಇಂದು ವಿಚಾರಣೆ ಆರಂಭಿಸಿದ ಕೋರ್ಟ್ ಮತ್ತೆ ಮುಂದೂಡಿದ್ದು, ಅಕ್ಟೋಬರ್ 17ಕ್ಕೆ ಮುಂದಿನ ವಿಚಾರಣಾ ದಿನಾಂಕವೆಂದು ನಿಗದಿಪಡಿಸಿದೆ.