ನವದೆಹಲಿ, ಅ 16 (Daijiworld News/MSP): ಸುಪ್ರೀಂಕೋರ್ಟ್ ನಲ್ಲಿ ಅಯೋಧ್ಯೆ ರಾಮಜನ್ಮಭೂಮಿ ಮತ್ತು ಬಾಬ್ರಿ ಕಟ್ಟಡ ಭೂ ವಿವಾದ ಪ್ರಕರಣದ ವಿಚಾರಣೆಯ ಕೊನೆಯ ದಿನವಾದ ಬುಧವಾರ ಸುನ್ನಿ ವಕ್ಫ್ ಬೋರ್ಡ್ ತಾನು ಸಲ್ಲಿಸಿದ್ದ ಪ್ರಕರಣವನ್ನು ಹಿಂಪಡೆಯಲು ನಿರ್ಧರಿಸಿದೆ.
ಸುನ್ನಿ ವಕ್ಫ್ ಬೋರ್ಡ್ ಮಂಡಳಿಯ ಅಧ್ಯಕ್ಷರು ಹಾಗೂ ಮಧ್ಯಸ್ಥಿಕೆ ಸಮಿತಿಯ ಸದಸ್ಯರಾದ ಶ್ರೀರಾಮ್ ಪಂಚು ಅವರಿಗೆ ಪ್ರಕರಣವನ್ನು ಹಿಂಪಡೆಯಲು ಅಫಿಡವಿಟ್ ಕಳುಹಿಸಿದ್ದಾರೆ ಎಂದು ಮಧ್ಯಸ್ಥಿಕೆ ನಿಯೋಗ ಸುಪ್ರೀಂಕೋರ್ಟ್ ಗೆ ಮಾಹಿತಿ ನೀಡಿದೆ ಎಂಬುದಾಗಿ ವರದಿಯಾಗಿದೆ.
ಇಡೀ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಕೀಲರೊಬ್ಬರು, ಹೆಚ್ಚಿನ ಸಮಯವಕಾಶ ಕೇಳಿದ್ದರು. ಆದರೆ ವಕೀಲರ ಮನವಿಯನ್ನು ಸಿಜೆಐ ವಜಾಗೊಳಿಸಿದರು ಇಂದು ಸಂಜೆ ಐದು ಗಂಟೆಯೊಳಗೆ ಪ್ರಕರಣದ ವಿಚಾರಣೆ ಮುಕ್ತಾಯವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪಷ್ಟಪಡಿಸಿದ್ದಾರೆ.
ಸಿಜೆಐ ಅಯೋಧ್ಯೆ ಪ್ರಕರಣದ ವಿಚಾರಣೆ ಇಂದು ಸಂಜೆ 5 ಗಂಟೆಗೆ ಕೊನೆಗೊಳ್ಳಲಿದೆ. ಹೀಗಾಗಿ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡುವಂತೆ ವಕೀಲರು ಮನವಿ ಮಾಡಿದ ಮನವಿಯನ್ನು ಸಿಜೆಐ ವಜಾಗೊಳಿಸಿದರು ಇಂದು ಸಂಜೆ ಐದು ಗಂಟೆಯೊಳಗೆ ಪ್ರಕರಣದ ವಿಚಾರಣೆ ಮುಕ್ತಾಯವಾಗಲಿದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಸ್ಪಷ್ಟಪಡಿಸಿದ್ದಾರೆ.
ಆದರೆ ಸುನ್ನಿ ವಕ್ಫ್ ಮಂಡಳಿ ಮನವಿಯನ್ನು ಹಿಂಪಡೆಯುವ ಬಗ್ಗೆ ನ್ಯಾಯಾಲಯದಲ್ಲಿ ಯಾವುದೇ ಚರ್ಚೆ ನಡೆದಿಲ್ಲ ಎಂದು ತಿಳಿದುಬಂದಿದೆ. ಈ ಧಿಡೀರ್ ಬೆಳವಣಿಗೆಗೆ ಕಾರಣ ವಕ್ಫ್ ಮಂಡಳಿ ಅಧ್ಯಕ್ಷ ಝಡ್ ಎ ಫಾರುಖಿ ವಿರುದ್ಧ ಎಫ್ ಐಆರ್ ದಾಖಲಾಗಿರುವುದು ಸದಸ್ಯರೊಳಗೆ ಅಸಮಾಧಾನ ತಂದಿರುವುದಾಗಿ ವರದಿ ವಿವರಿಸಿದೆ.