ಬೆಂಗಳೂರು, ಅ.17(Daijiworld News/SS): ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇಂದು ಬೆಳಗ್ಗೆಯಿಂದಲೂ ಮೋಡ ಮುಸುಕಿದ ವಾತಾವರಣ ನಿರ್ಮಾಣವಾಗಿದ್ದು, ಮುಂದಿನ 48 ಗಂಟೆಗಳ ಕಾಲ ಮಳೆ ಮುಂದುರೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಳಿಯು ಗಂಟೆಗೆ 11 ಕಿ.ಮೀ ವೇಗದಲ್ಲಿ ಚಲಿಸುತ್ತಿದೆ. ಶೇ.99ರಷ್ಟು ತೇವಾಂಶವೂ ದಾಖಲಾಗಿದೆ. ರಾಜ್ಯಾದ್ಯಂತ ಐದು ದಿನಗಳ ಕಾಲ ಭಾರಿ ಮಳೆ ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ರಾಜ್ಯದಾದ್ಯಂತ ಮತ್ತೆ ಮುಂಗಾರು ಚುರುಕಾಗಿದ್ದು ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ಹಲವೆಡೆ ಭಾರಿ ಮಳೆಯಾಗಿತ್ತಿದೆ. ಚಿಂತಾಮಣಿ, ಭಾಗಮಂಡಲ, ಮಂಗಳೂರು, ಪಣಂಬೂರ್, ಯಲಬುರ್ಗಾ, ಕುಷ್ಟಗಿಯಲ್ಲಿ ಹೆಚ್ಚು ಮಳೆಯಾಗಿದೆ. ಅಕ್ಟೋಬರ್ ಅಂತ್ಯದವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.