ಬೆಂಗಳೂರು,ಅ 17 (DaijiworldNews/SM): ಅರಬ್ಬಿ ಸಮುದ್ರದಲ್ಲಿ 45ರಿಂದ 55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕರಾವಳಿ ಸೇರಿದಂತೆ ಕೇರಳ ಕಡಲಲ್ಲಿ ಭಾರೀ ಪ್ರಮಾಣದಲ್ಲಿ ಗಾಳಿ ಬೀಸುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಏರುಪೇರು ಉಂಟಾಗಿದ್ದು ಬಿರುಸಿನಿಂದ ಗಾಳಿ ಬೀಸುವ ಮುನ್ನೆಚ್ಚರಿಕೆಯನ್ನು ಇಲಾಖೆ ನೀಡಿದೆ.
ಅಕ್ಟೋಬರ್ 17ರ ಗುರುವಾರದಿಂದ ಅಕ್ಟೋಬರ್ 19ರ ಶನಿವಾರದ ತನಕ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಹಿನ್ನೆಲೆ ಮೀನುಗಾರರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.