ಮಹೇಂದ್ರಗಢ, ಅ 18 (DaijiworldNews/SM): ದೇಶದಲ್ಲಿ ಆರ್ಥಿಕತೆ ಕುಸಿದಿದೆ. ಇದಕ್ಕೆ ಪ್ರಮುಖ ಕಾರಣ ದೇಶದ ಪ್ರಧಾನಮಂತ್ರಿಗಳು. ಪ್ರಧಾನಮಂತ್ರಿ ನರೇಂದ್ರ ಮೋದಿಗೆ ಆರ್ಥಿಕತೆಯ ಯಾವುದೇ ತಿಳುವಳಿಕೆ ಇಲ್ಲ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವ್ಯಂಗ್ಯವಾಡಿದ್ದಾರೆ.
ಮಹೇಂದ್ರಗಢದಲ್ಲಿ ನಡೆದ ಚುನಾವಣಾ ಪ್ರಚಾರ ರ್ಯಾಲಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ವಿಭಜನೆ ರಾಜಕೀಯ ಮಾಡುತ್ತಿದೆ. ವಿಭಜನೆ ರಾಜಕಾರಣದಿಂದಾಗಿ ಸಾರ್ವಜನಿಕರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದರು. ಅಪನಗದೀಕರಣ ಹಾಗೂಜಿಎಸ್ಟಿಯಿಂದಾಗಿ ಸಣ್ಣ ಮತ್ತು ಮಧ್ಯಮ ವರ್ಗ ಸಂಕಷ್ಟಕ್ಕೀಡಾಗಿದೆ. ಮಧ್ಯಮ ವರ್ಗದ ಉದ್ಯಮಗಳನ್ನು ಸರ್ವನಾಶ ಮಾಡಿದೆ ಎಂದರು.