ಬೆಂಗಳೂರು, ಅ 19 (Daijiworld News/MSP): ಕಾಲೇಜಿನ ವೇದಿಕೆಯಲ್ಲಿ ರ್ಯಾಂಪ್ ವಾಕ್ ಅಭ್ಯಾಸ ಮಾಡುತ್ತಿದ್ದ ವೇಳೆ ವಿದ್ಯಾರ್ಥಿನಿಯೋರ್ವಳು ಪೀಣ್ಯ ಏಮ್ಸ್ ಕಾಲೇಜಿನಲ್ಲಿ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಶಾಲಿನಿ(21) ಮೃತಪಟ್ಟ ವಿದ್ಯಾರ್ಥಿನಿ. ಶಾಲಿನಿ ಎಂಬಿಎ ಓದುತ್ತಿದ್ದು, ಕಾಲೇಜಿನಲ್ಲಿ ಪ್ರೆಶರ್ಸ್ ಡೇ ಪ್ರಯುಕ್ತ ರ್ಯಾಂಪ್ ವಾಕ್ ಅಭ್ಯಾಸ ನಡೆಸುತ್ತಿದ್ದರು.. ಆ ವೇಳೆ ರ್ಯಾಂಪ್ ವಾಕ್ ಮಾಡುತ್ತಿದ್ದ ಶಾಲಿನಿ ವೇದಿಕೆಯ ಮೇಲೆ ಕುಸಿದು ಬಿದ್ದಿದ್ದರು. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಆ ವೇಳೆಗಾಗಲೇ ಶಾಲಿನಿ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಾಲಿನಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಪ್ತಗಿರಿ ಆಸ್ಪತ್ರೆಗೆ ರವಾನಿಸಲಾಗಿದೆ.