ಬೆಂಗಳೂರು,ಅ 20 (Daijiworld News/MSP): ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಅವರಿಗೆ ಲಘು ಹೃದಯಾಘಾತವಾಗಿದೆ. ಈ ಹಿನ್ನೆಲೆ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ಬೆಳಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಮೂಲಗಳ ಪ್ರಕಾರ ಜಮೀರ್ ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ.
ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.