ಹುಬ್ಬಳ್ಳಿ, ಅ 21 (Daijiworld News/MSP): ಹುಬ್ಬಳ್ಳಿ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ ಸಂಖ್ಯೆ 1 ರಲ್ಲಿ ಸೋಮವಾರ ಮಧ್ಯಾಹ್ನ ಈ ಸ್ಪೋಟ ಸಂಭವಿಸಿದೆ. ಪರಿಣಾಮ ಹುಬ್ಬಳ್ಳಿಯ ಮಂತೂರು ರಸ್ತೆಯ ಮೂಲದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರನ್ನು ಹುಸೇನ್ ಸಾಬ್ (22) ಎಂದು ಗುರುತಿಸಲಾಗಿದ್ದು ಈತ ನಿಲ್ದಾಣದ ರೆಸ್ಟೋರೆಂಟ್ನಲ್ಲಿ ಉದ್ಯೋಗಿಯಾಗಿದ್ದಾನೆ ಎಂದು ಮಾಹಿತಿ ತಿಳಿದುಬಂದಿದೆ.
ಸ್ಪೋಟದ ಪರಿಣಾಮ ಸ್ಟೇಷನ್ ಮಾಸ್ಟರ್ಸ್ ಕಚೇರಿಯ ಗಾಜಿನ ಬಾಗಿಲು ಒಡೆದಿದೆ. ರೈಲ್ವೆ ಅಧಿಕಾರಿಗಳು ಹುಸೇನ್ ಸಾಬ್ ಎಂಬುವರ ನೆರವಿನಿಂದ ಬಾಕ್ಸ್ ಅನ್ನು ತೆರೆಯಲು ಯತ್ನಿಸುತ್ತಿದ್ದಾಗ ಈ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಘಟನೆಯ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಬಸವರಾಜ್ ಬೊಮ್ಮಯಿ, ಹುಬ್ಬಳ್ಳಿಯಲ್ಲಿ ನಡೆದ ಸ್ಪೋಟದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ. ಮಾತ್ರವಲ್ಲದೆ ಘಟನೆಯ ಹಿನ್ನಲೆಯಲ್ಲಿ ಮಹಾರಾಷ್ಟ್ರ ಹಾಗೂ ಆಂದ್ರಪ್ರದೇಶದ ಪೊಲೀಸರ ಜತೆ ಸಂಪರ್ಕ ಮಾಡಲಾಗಿದೆ.
ರಾಜ್ಯದ ಎಲ್ಲಾ ನಿಲ್ದಾಣದಲ್ಲಿ ಹೆಚ್ಚುವರಿ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದ್ದು, ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲು ಇಲಾಖೆಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.