ನವದೆಹಲಿ, ಅ 22 (Daijiworld News/MSP): ಐಎನ್ಎಕ್ಸ್ ಮೀಡಿಯಾ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐನಿಂದ ಬಂಧನಕ್ಕೊಳಗಾಗಿರುವ ಮಾಜಿ ಕೇಂದ್ರ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ಸುಪ್ರೀಂಕೋರ್ಟ್ ಮಂಗಳವಾರ ಜಾಮೀನು ಮಂಜೂರು ಮಾಡಿದೆ.
ಕಾಂಗ್ರೆಸ್ ನಾಯಕ ಚಿದಂಬರಂ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಕಾಂಗ್ರೆಸ್ ನಾಯಕ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಅವರಿಗೆ ಜಾಮೀನು ಲಭಿಸಿದರೂ ಜಾಮೀನು ಲಭಿಸಿದ್ದರೂ ಈ.ಡಿ ಕಸ್ಟಡಿಯಲ್ಲಿರುವ ಕಾರಣ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.
ಜಾಮೀನಿಗಾಗಿ ಚಿದಂಬಂ ಅವರು ಇಬ್ಬರ ಶ್ಯೂರಿಟಿ ಸಹಿತ ಒಂದು ಲಕ್ಷ ರೂ. ಜಾಮೀನು ಬಾಂಡ್ ಸಲ್ಲಿಸುವ ಅಗತ್ಯವಿದೆ. ವಿಚಾರಣಾ ನ್ಯಾಯಾಲಯಕ್ಕೆ ಪಾಸ್ಪೋರ್ಟ್ ಸೆರೆಂಡರ್ ಮಾಡಬೇಕಾಗುತ್ತದೆ. ಮಾತ್ರವಲ್ಲದೆ ನ್ಯಾಯಾಲಯದ ಅನುಮತಿಯಿಲ್ಲದೆ ದೇಶ ತೊರೆದು ಹೋಗುವಂತಿಲ್ಲ.