ನವದೆಹಲಿ, ಅ.22(Daijiworld News/SS): ವಿಧಾನಸಭೆಯ ಸ್ಪೀಕರ್ ಆಗಿದ್ದ ರಮೇಶ್ ಕುಮಾರ್ ತಮ್ಮನ್ನು 15ನೇ ವಿಧಾನಸಭೆ ಉಳಿದ ಅವಧಿಗೆ ಅನರ್ಹಗೊಳಿಸಿದ್ದನ್ನು ಪ್ರಶ್ನಿಸಿ 17 ಅನರ್ಹ ಶಾಸಕರು ಸುಪ್ರೀಂಕೋರ್ಟ್'ನಲ್ಲಿ ಸಲ್ಲಿಸಿರುವ ಅರ್ಜಿಯ ಮಹತ್ವದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಅ.23ಕ್ಕೆ ಮುಂದೂಡಿದೆ.
ಇಂದು ನ್ಯಾ. ಎಸ್ ವಿ ರಮಣ ಅವರು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡರು. ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ಚುನಾವಣೆ ನೀತಿ ಸಂಹಿತೆಗೆ ಸಂಬಂಧಿಸಿದಂತೆ ಹೈಕೊರ್ಟ್ನಲ್ಲಿ ವಿಚಾರಣೆ ಬಾಕಿ ಇರುವುದನ್ನು ಪ್ರಸ್ತಾಪಿಸಿ ವಿಚಾರಣೆಯನ್ನು ನಾಳೆಗೆ ಮುಂದೂಡುವಂತೆ ಒತ್ತಾಯಿಸಿದರು.
ಇದೀಗ ಮನವಿಯನ್ನು ಪುರಸ್ಕರಿಸಿರುವ ಎನ್.ವಿ.ರಮಣ ನೇತೃತ್ವದ ಪೀಠ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದೆ.