ನವದೆಹಲಿ, ಅ.23(Daijiworld News/SS): ಅಕ್ರಮ ಹಣ ಪತ್ತೆ ಪ್ರಕರಣದ ಆರೋಪದಡಿ ಸದ್ಯ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟಗೊಳ್ಳಲಿದೆ.
ಇ.ಡಿ. ವಿಶೇಷ ನ್ಯಾಯಾಲಯ ಡಿಕೆಶಿ ಜಾಮೀನು ಅರ್ಜಿಯನ್ನು ವಜಾ ಮಾಡಿದ ಹಿನ್ನೆಲೆಯಲ್ಲಿ ಡಿಕೆಶಿ ಪರ ವಕೀಲರು ದೆಹಲಿ ಹೈಕೋರ್ಟ್ನಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸುರೇಶ್ ಕುಮಾರ್ ಅವರು ತೀರ್ಪನ್ನು ಇಂದಿಗೆ ಕಾಯ್ದಿರಿದ್ದರು. ಇಂದು ಮಧ್ಯಾಹ್ನ 2.30ಕ್ಕೆ ತೀರ್ಪು ಹೊರಬೀಳಲಿದೆ.
ಇ.ಡಿ. ಬಂಧನಕ್ಕೆ ಸಿಲುಕಿ ತೀವ್ರ ವಿಚಾರಣೆಗೆ ಒಳಗಾಗಿರುವ ಡಿ.ಕೆ.ಶಿವಕುಮಾರ್, ಜಾಮೀನು ನೀಡುವಂತೆ ದೆಹಲಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿಂದೆ ವಿಚಾರಣೆ ನಡೆದಿದ್ದು ಡಿ.ಕೆ.ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದ್ದರು. ಇ.ಡಿ.ಪರ ನಟರಾಜ್ ವಾದ ಮಾಡಿದ್ದರು.
ಡಿ.ಕೆ.ಶಿವಕುಮಾರ್ ಅವರದ್ದು ಬಂಧಿಸುವ ಪ್ರಕರಣವೇ ಅಲ್ಲ. ಇ.ಡಿ.ಅಧಿಕಾರಿಗಳು ಕೇಸ್ ನಿರ್ವಹಣೆ ಮಾಡಿದ ರೀತಿಯೇ ತಪ್ಪಿದೆ. ಅಲ್ಲದೆ ಡಿಕೆಶಿ ಆರೋಗ್ಯವೂ ಸರಿಯಿಲ್ಲ. ಇದನ್ನೆಲ್ಲ ಪರಿಗಣಿಸಿ ಅವರಿಗೆ ಜಾಮೀನು ನೀಡಬೇಕು ಎಂದು ಕೋರ್ಟ್ನಲ್ಲಿ ವಾದಿಸಿದ್ದರು.