ನವದೆಹಲಿ, ಅ.24(Daijiworld News/SS): ಭಾರತದಲ್ಲಿ ಭೀಕರ ದಾಳಿ ನಡೆಸಲು ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನೇತೃತ್ವದ ಉಗ್ರ ಸಂಘಟನೆಗಳು ಸಂಚು ರೂಪಿಸಿವೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.
ಪಾಕಿಸ್ತಾನ ಮೂಲದ ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ದೆಹಲಿಯಲ್ಲಿರುವ ಭಾರತೀಯ ಸೇನೆ ಮತ್ತು ರೀಸರ್ಚ್ ಅಂಡ್ ಅನಾಲಿಸಿಸ್ ವಿಂಗ್(ರಾ) ಕಚೇರಿಗಳ ಮೇಲೆ ದಾಳಿ ನಡೆಸಲು ಭಾರಿ ಸಂಚು ರೂಪಿಸಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ.
ದೀಪಾವಳಿಯ ಸಮಯ ಅಂದರೆ ಅಕ್ಟೋಬರ್ ತಿಂಗಳ ಅಂತ್ಯದಲ್ಲಿ ಭಾರತೀಯ ಸೇನಾ ಮತ್ತು ರಾ ಕಚೇರಿಗಳ ಮೇಲೆ ದಾಳಿ ನಡೆಸಲು ಜಮಾತ್ - ಉದ್- ದಾವಾ ಹಾಗೂ ಲಷ್ಕರ್-ಇ- ತೊಯ್ಬಾ(ಎಲ್ಇಟಿ) ಉಗ್ರ ಸಂಘಟನೆಗಳು ಸಂಚು ರೂಪಿಸಿವೆ. ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದು, ಎಲ್ಲೆಡೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ.