ಬೆಂಗಳೂರು, ಅ.24(Daijiworld News/SS): ಕೇವಲ ಕೇಂದ್ರ ಸರ್ಕಾರ ಮಾತ್ರವಲ್ಲ, ರಾಜ್ಯದಲ್ಲೂ ಕೂಡಾ ಸರ್ಕಾರ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೇಂದ್ರ ಸರ್ಕಾರ ರಾಜ್ಯವನ್ನ ಕಡೆಗಣಿಸಿದೆ. ರಾಜ್ಯದಲ್ಲಿ ನೆರೆ ಪೀಡಿತರಿಗೆ ಇನ್ನೂ ಒಂದು ಪೈಸೆ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತೇವೆ. ರಾಜ್ಯ ಹಾಗೂ ಕೇಂದ್ರ ಸರ್ಕಾರವನ್ನ ಎಬ್ಬಿಸಲು ನಮ್ಮ ಹೋರಾಟ ಎಂದು ಹೇಳಿದರು.
ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಬೃಹತ್ ಹೋರಾಟ ಮಾಡುತ್ತೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳುತ್ತೇವೆ. ದೀಪಾವಳಿ ನಂತರ ಪಾದಯಾತ್ರೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
ಮಹಾರಾಷ್ಟ್ರ ಹಾಗೂ ಹರ್ಯಾಣದಲ್ಲಿ ಕಾಂಗ್ರೆಸ್ ಸೋಲಿಸಬೇಕೆಂದು ಬಿಜೆಪಿಯಿಂದ ಬ್ಲ್ಯಾಕ್'ಮೇಲ್ ರಾಜಕಾರಣ ಮಾಡಲಾಗಿತ್ತು. ಕಾಂಗ್ರೆಸ್ ಧೂಳಿಪಟ ಆಗುತ್ತೆ ಎಂದು ಹೇಳಿದ್ದರು. ಕಾಂಗ್ರೆಸ್ ಪಕ್ಷವನ್ನು ಸರ್ವನಾಶ ಮಾಡೋಕೆ ಪ್ರಯತ್ನ ಮಾಡಿದ್ದರು. ಆದ್ರೆ ಅದು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು.