ಬೆಂಗಳೂರು, ಅ.25(Daijiworld News/SS): ಸ್ಪೀಕರ್ ಬಗ್ಗೆ ಇಷ್ಟೊಂದು ಕೀಳಾಗಿ ಮಾತನಾಡಿರುವವರನ್ನು ನನ್ನ ರಾಜಕೀಯ ಜೀವನದಲ್ಲೇ ನೋಡಿಲ್ಲ ಎಂದು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಬಗ್ಗೆ ಸಾರ್ವಜನಿಕವಾಗಿ ಏಕವಚನದಲ್ಲಿ ಮಾತನಾಡಿದ್ದಕ್ಕೆ ವಿವಿಧ ನಾಯಕರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಹಿನ್ನಲೆ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್, ಸ್ಪೀಕರ್ ಸ್ಥಾನದ ಘನತೆ ಮರೆತು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅವನು, ಇವನು ಎಂದು ಮಾತನಾಡಿರುವ ಸಿದ್ದರಾಮಯ್ಯ ಅವರಿಗೂ ಇನ್ನು ಮುಂದೆ ಏಕವಚನ ಬಳಸಬೇಕಾಗುತ್ತದೆ. ಸಿದ್ದರಾಮಯ್ಯ ಅವರ ಈ ಸೊಕ್ಕು ಹೆಚ್ಚು ದಿನ ನಡೆಯುವುದಿಲ್ಲ. ಕೂಡಲೇ ಅವರು, ಸ್ಪೀಕರ್ ಕ್ಷಮೆ ಕೇಳಬೇಕು ಎಂದು ಎಚ್ಚರಿಕೆ ಆಗ್ರಹಿಸಿದರು.
ಮುಖ್ಯಮಂತ್ರಿಯಾಗಿ ಕೆಲಸ ಮಾಡಿರುವ ಸಿದ್ದರಾಮಯ್ಯ, ಈ ರೀತಿ ಮಾತನಾಡುವುದನ್ನು ನೋಡಿದರೆ ಅವರಿಗೆ ಮನೋರೋಗ ಇರಬೇಕು ಎಂದು ದೂರಿದರು.