ಕಲಬುರಗಿ, ಅ.25(Daijiworld News/SS): ಇಂದು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಆಪರೇಷನ್ ಕಮಲ ಆಡಿಯೋ ಕ್ಲಿಪ್ ಪ್ರಕರಣದ ವಿಚಾರಣೆ ಮೇಲಿದ್ದ ತಡೆ ತೆರವುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಯಲಿದೆ.
ರಾಯಚೂರು ಜಿಲ್ಲೆಯ ದೇವದುರ್ಗ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಈ ದೂರಿನ ವಿರುದ್ಧ ಆರೋಪಿಗಳು ಸಲ್ಲಿಸಿದ್ದ ಮನವಿಯನ್ನು ಪರಿಗಣಿಸಿಯೇ ಕಲಬುರಗಿ ಹೈಕೋರ್ಟ್ ಪೀಠ ತಡೆ ನೀಡಿತ್ತು. ಆಪರೇಷನ್ ಕಮಲಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ದೇವದುರ್ಗ ಶಾಸಕ ಶಿವನಗೌಡ ನಾಯಕ್, ಪೀತ್ರಂ ಗೌಡ ಮತ್ತು ಪತ್ರಕರ್ತ ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು. ಇದೀಗ ಈ ಕುರಿತ ವಿಚಾರಣೆ ಕಲಬುರಗಿ ಹೈಕೋರ್ಟ್ ಪೀಠದಲ್ಲಿ ನಡೆಯಲಿದೆ.
ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಅವರ ಪುತ್ರ ಶರಣಗೌಡ ಕಂದಕೂರ್ ಈ ತಡೆ ತೆರವುಗೊಳಿಸುವಂತೆ ಆಗ್ರಹಿಸಿ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದರು.
ಸರ್ಕಾರಿ ವಕೀಲರಾಗಿ ಸಂಜಯ್ ಚೌಟಾ ವಾದ ಮಂಡಿಸುತ್ತಿದ್ದು, ಬಿಎಸ್ವೈ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ.