ಶ್ರೀನಗರ, ಅ.25(Daijiworld News/SS): ದಕ್ಷಿಣ ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮತ್ತೆ ಉಗ್ರರು ಅಟ್ಟಹಾಸ ಮೆರೆಯುತ್ತಿದ್ದು, ಇಬ್ಬರು ಟ್ರಕ್ ಚಾಲಕರನ್ನು ಉಗ್ರರು ಗುಂಡಿಕ್ಕಿ ಕೊಲೆಗೈದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜಸ್ಥಾನದ ಮೊಹಮ್ಮದ್ ಇಲಿಯಾಸ್ ಮತ್ತು ಪಂಜಾಬ್ನ ಜೀವನ್ ಮೃತ ಚಾಲಕರು.
ಸೇಬು ಹಣ್ಣುಗಳನ್ನು ತುಂಬಿಸಿಕೊಳ್ಳಲು ತೆರಳಿದ್ದ ಟ್ರಕ್ಗಳನ್ನು ಉಗ್ರರು ಅಡ್ಡಗಟ್ಟಿ, ಅದರೊಳಗಿದ್ದ ಚಾಲಕರನ್ನು ಗುಂಡಿಕ್ಕಿ ಕೊಲೆ ಮಾಡಿದ್ದಾರೆ. ಅಲ್ಲದೆ ಅವರ ಟ್ರಕ್ಗೆ ಬೆಂಕಿ ಹಚ್ಚಿದ್ದಾರೆ. ಈ ವೇಳೆ ಇನ್ನೋರ್ವ ಚಾಲಕ ಗಾಯಗೊಂಡಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಸದ್ಯ ಆರೋಪಿಗಳನ್ನು ಪತ್ತೆಹಚ್ಚಲು ತನಿಖೆ ಕೈಗೊಂಡಿದ್ದು, ಆದಷ್ಟು ಬೇಗ ಉಗ್ರರನ್ನು ಬಂಧಿಸುವ ಪ್ರಯತ್ನದಲ್ಲಿದ್ದೇವೆ ಎಂದು ಭದ್ರತಾ ಪಡೆಗಳ ಅಧಿಕಾರಿಗಳು ತಿಳಿಸಿದ್ದಾರೆ.