ಚಂಢೀಗಡ, ಅ 27 (DaijiworldNews/SM): 2ನೇ ಅವಧಿಗೆ ಹರಿಯಾಣದ ಮುಖ್ಯಮಂತ್ರಿಯಾಗಿ ಮನೋಹರ್ ಲಾಲ್ ಖಟ್ಟರ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಉಪಮುಖ್ಯಮಂತ್ರಿಯಾಗಿ ಜನ ನಾಯಕ್ ಜನತಾ ಪಕ್ಷದ ದುಷ್ಯಂತ್ ಚೌಟಾಲ ಅಧಿಕಾರ ವಹಿಸಿಕೊಂಡಿದ್ದಾರೆ.
ರಾಜಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಮನೋಹರ ಲಾಲ್ ಖಟ್ಟರ್ ಹಾಗೂ ದುಷ್ಯಂತ್ ಚೌಟಾಲ ಅವರಿಗೆ ಹರ್ಯಾಣ ಗವರ್ನರ್ ಸತ್ಯದೇವ್ ನಾರಾಯಣ ಆರ್ಯ ಪ್ರಮಾಣ ವಚನ ಬೋಧಿಸಿದರು.
ಇನ್ನು ಸಮಾರಂಭದಲ್ಲಿ ಹಲವು ಗಣ್ಯರು ಉಪಸ್ಥಿತರಿದ್ದರು. ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಜೆ. ಪಿ. ನಡ್ಡಾ, ಶಿರೋಮಣಿ ಅಕಾಲಿ ದಳ ಮುಖಂಡ ಪ್ರಕಾಶ್ ಸಿಂಗ್ ಬಾದಲ್ ಮತ್ತಿತರರು ಭಾಗವಹಿಸಿದ್ದರು. ಈ ಮೂಲಕ ಹರ್ಯಾಣದಲ್ಲಿ ಬಿಜೆಪಿ ಹಾಗೂ ಜೆಜೆಪಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದಿದೆ.