ನವದೆಹಲಿ, ಅ 28 (Daijiworld News/MSP): ಮುಖ್ಯಮಂತ್ರಿ ಹುದ್ದೆಗಾಗಿ ಬಿಜೆಪಿ-ಶಿವಸೇನೆ ಮೈತ್ರಿಕೂಟದ ನಡುವೆ ನಡೆದಿರುವ ಹಗ್ಗ ಜಗ್ಗಾಟದಿಂದ ಮಹಾರಾಷ್ಟ್ರದಲ್ಲಿ ನೂತನ ಸರ್ಕಾರ ರಚನೆ ವಿಳಂಬವಾಗುತ್ತಿರುವ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ, ಬುಧವಾರ ಮುಂಬೈಗೆ ಭೇಟಿ ನೀಡಲಿದ್ದು, ನೂತನ ಶಾಸಕರೊಂದಿಗೆ ಸಭೆ ನಡೆಸಲಿದ್ದಾರೆ. ಬಳಿಕ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ ಅವರನ್ನು ಭೇಟಿ ಮಾಡಲಿದ್ದಾರೆ.
ಶಿವಸೇನೆ 50-50 ಒಪ್ಪಂದಕ್ಕೆ ಬೇಡಿಕೆ ಸಲ್ಲಿಸಿದ್ದು ಮುಖ್ಯಮಂತ್ರಿ ಹುದ್ದೆ 50:50 ಸೂತ್ರದ ಅನುಸಾರ ಹಂಚಿಕೆಯಾಗಬೇಕು. 5 ವರ್ಷದಲ್ಲಿ ಎರಡೂವರೆ ವರ್ಷ ಶಿವಸೇನೆಯವರಿಗೆ ಸಿಎಂ ಹುದ್ದೆ ನೀಡಬೇಕು ಎಂದಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಶಾಸಕರಾಗಿ ಅಯ್ಕೆಯಾಗಿರುವ ಉದ್ದವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬುದು ಶಿವಸೇನೆಯ ಬೇಡಿಕೆಯಲ್ಲೊಂದಾಗಿದೆ.
ಈ ಹಿನ್ನಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಆಗಮಿಸಿದಲಿದ್ದಾರೆ ಮುಂಬೈಗೆ ಆಗಮಿಸಲಿದ್ದಾರೆ. ಶಾಸಕರೊಂದಿಗೆ ಸಭೆ ನಂತರ ಉದ್ದವ್ ಠಾಕ್ರೆ ಅವರನ್ನು ಶಾ ಭೇಟಿ ಮಾಡ್ ಚರ್ಚೆ ನಡೆಸಲಿದ್ದಾರೆ ಎಂದು ಸರ್ಕಾರ ರಚನೆ ಕುರಿತಂತೆ ಚರ್ಚೆ ಹೇಳಿದ್ದಾರೆ.