ಬೆಂಗಳೂರು, ಅ.29(Daijiworld News/SS): 2019-20ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 18 ಜಿಲ್ಲೆಗಳ 49 ತಾಲೂಕುಗಳು ಮಳೆ ಕೊರತೆ ಹಾಗೂ ಅಂತರ್ಜಲ ಕುಸಿತ ಎದುರಿಸುತ್ತಿವೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ರಾಜ್ಯ ಸರ್ಕಾರವು, ರಾಜ್ಯದ 18 ಜಿಲ್ಲೆಗಳ 49 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ.
ಬರಪೀಡಿತ ಪ್ರದೇಶದ ಪಟ್ಟಿಯಲ್ಲಿ, ಬೆಂಗಳೂರು ನಗರ ಜಿಲ್ಲೆಯ ಆನೇಕಲ್, ಬೆಂಗಳೂರು ಉತ್ತರ, ಬೆಂಗಳೂರು ಪೂರ್ವ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ನೆಲಮಂಗಲ, ದೊಡ್ಡಬಳ್ಳಾಪುರ, ರಾಮನಗರ ಜಿಲ್ಲೆಯ ಕನಕಪುರ, ರಾಮನಗರ, ಕೋಲಾರ ಜಿಲ್ಲೆಯ ಬಂಗಾರಪೇಟೆ, ಕೋಲಾರ, ಮಾಲೂರು, ಮುಳಬಾಗಿಲು, ಶ್ರೀನಿವಾಸಪುರ ಬರ ಪೀಡಿ ತಾಲೂಕುಗಳು ಇವೆ
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ, ಚಿಂತಾಮಣಿ, ಗುಡಿಬಂಡೆ, ತುಮಕೂರು ಜಿಲ್ಲೆಯ ಗುಬ್ಬಿ, ಕೊರಟಗೆರೆ, ಕುಣಿಗಲ್, ಮಧುಗಿರಿ, ಪಾವಗಡ, ತುರುವೇಕೆರೆ, ತುಮಕೂರು, ಚಿತ್ರದುರ್ಗ ಜಿಲ್ಲೆಯ ಚಳ್ಳೇಕೆರೆ, ಚಿತ್ರದುರ್ಗ, ಮೊಳಕಾಲ್ಮೂರು, ದಾವಣಗೆರೆ ಜಿಲ್ಲೆಯ ಜಗಳೂರು, ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ, ಬಳ್ಳಾರಿ ಜಿಲ್ಲೆಯ ಬಳ್ಳಾರಿ, ಹೊಸಪೇಟೆ, ಸಂಡೂರು, ಸಿರುಗುಪ್ಪ, ಕೊಪ್ಪಳ ಜಿಲ್ಲೆಯ ಗಂಗಾವತಿ, ರಾಯಚೂರು ಮಾನ್ವಿ, ರಾಯಚೂರು, ಸಿಂಧನೂರು ಬರಪೀಡಿತ ಪ್ರದೇಶಗಳು.
ಇನ್ನೂ ಕಲಬುರಗಿ ಜಿಲ್ಲೆಯ ಚಿಂಚೋಳಿ, ಜೇವರ್ಗಿ, ಸೇಡಂ, ಯಾದಗಿರಿ ತಾಲೂಕು, ಬೆಳಗಾವಿ ಜಿಲ್ಲೆಯ ಅಥಣಿ, ಬಾಗಲಕೋಟೆ ಬಾದಾಮಿ, ಬೀಳಗಿ, ಜಮಖಂಡಿ, ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ, ಇಂಡಿ, ಸಿಂಧಗಿ, ವಿಜಯಪುರ ಹಾಗೂ ಗದಗ ಜಿಲ್ಲೆಯ ನಗರಗುಂದ ತಾಲೂಕುಗಳು ಬರ ಪೀಡಿತ ಎಂದು ಸರ್ಕಾರ ಘೋಷಿಸಿದೆ.