ಶ್ರೀನಗರ, ಅ.29(Daijiworld News/SS): ದಕ್ಷಿಣ ಕಾಶ್ಮೀರದ ಅನಂತ್ನಾಗ್ ಜಿಲ್ಲೆಯ ಬಿಜ್ಬೆಹರಾದಲ್ಲಿ ಉಗ್ರರು ಟ್ರಕ್ ಚಾಲಕನನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ವರದಿಯಾಗಿದೆ.
ಕಣಿವೆ ರಾಜ್ಯದಲ್ಲಿ ಉಗ್ರರ ಉಪಟಳ ಹೆಚ್ಚಾಗಿದ್ದು, ಭಯೋತ್ಪಾದಕರ ದಾಳಿಗೆ ಮತ್ತೊಬ್ಬ ಲಾರಿ ಚಾಲಕ ಬಲಿಯಾಗಿದ್ದಾನೆ. ಚಾಲಕನನ್ನು ಉಧಮ್ಪುರ ಜಿಲ್ಲೆಯ ಕಾತ್ರಾ ಪ್ರದೇಶದ ನಾರಾಯಣ್ ದತ್ ಎಂದು ಗುರುತಿಸಲಾಗಿದೆ.
ವಿಷಯ ತಿಳಿದ ಕೂಡಲೇ ಸ್ಥಳೀಯ ಪೊಲೀಸ್ ಅಧಿಕಾರಿ ಸ್ಥಳಕ್ಕೆ ಧಾವಿಸಿದ್ದಾರೆ. ಸುತ್ತಮುತ್ತಲ ಪ್ರದೇಶದಲ್ಲಿ ಇದ್ದ ಇನ್ನಿಬ್ಬರು ಟ್ರಕ್ ಚಾಲಕರನ್ನು ಪೊಲೀಸರು ರಕ್ಷಿಸಿದ್ದಾರೆ. ಬಳಿಕ ದಾಳಿಕೋರರನ್ನು ಸೆದೆ ಬಡೆಯಲು ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.