ಜಮ್ಮು-ಕಾಶ್ಮೀರ, ಅ 29 (DaijiworldNews/SM): ಜಮ್ಮು-ಕಾಶ್ಮೀರದಲ್ಲಿ ಉಗ್ರರು ತಮ್ಮ ಅಮಾನವೀಯ ಕೃತ್ಯವನ್ನು ಮುಂದುವರೆಸಿದ್ದಾರೆ. ಇಲ್ಲಿನ ಕುಲ್ಗಾಮ್ ನಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಐವರು ಕಾರ್ಮಿಕರನ್ನು ಉಗ್ರರು ಬಲಿ ಪಡೆದುಕೊಂಡಿದ್ದಾರೆ.
ಜಮ್ಮುವಿನಲ್ಲಿದ್ದ ಕಾರ್ಮಿಕರ ಪೈಕಿ ಒಂದು ತಂಡವನ್ನು ಉಗ್ರರು ಅಪಹರಿಸಿದ್ದರು. ಬಳಿಕ ಗುಂಡು ಹಾರಿಸಿ ಕಾರ್ಮಿಕರನ್ನು ಉಗ್ರರು ಹತ್ಯೆಗೈದಿದ್ದಾರೆ. ಘಟನೆಯಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕಾಶ್ಮೀರೇತರರನ್ನು ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದಾರೆ. ಪಶ್ಚಿಮ ಬಂಗಾಳದ ಕಾರ್ಮಿಕರನ್ನು ಕಿಡ್ನಾಪ್ ಮಾಡುವ ಮೂಲಕ ಅವರನ್ನು ಹತ್ಯೆ ಮಾಡಿದ್ದಾರೆ.