ನವದೆಹಲಿ, ಅ.30(Daijiworld News/SS): ಅನಾರೋಗ್ಯದ ಹಿನ್ನೆಲೆಯಲ್ಲಿ ತಮಗೆ ಮಧ್ಯಂತರ ಜಾಮೀನು ನೀಡಬೇಕು ಎಂದು ಚಿದಂಬರಂ ಪರ ವಕೀಲ ಕಪಿಲ್ ಸಿಬಲ್ ಅವರು ಹೆಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿಎನ್ ಪಟೇಲ್ ಮತ್ತು ನ್ಯಾಯಮೂರ್ತಿ ಸಿ ಹರಿ ಶಂಕರ್ ಪೀಠಕ್ಕೆ ಅರ್ಜಿ ಸಲ್ಲಿಸಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಬಂಧನಕ್ಕೊಳಗಾಗಿರುವ ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಮಧ್ಯಂತರ ಜಾಮೀನು ಕೋರಿ ದೆಹಲಿ ಹೈಕೋರ್ಟ್'ಗೆ ಅರ್ಜಿ ಸಲ್ಲಿಸಿದ್ದಾರೆ. ಸದ್ಯ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಚಿದಂಬರಂ ಅವರನ್ನು ಇಂದು ವಿಶೇಷ ಕೋರ್ಟ್'ಗೆ ಹಾಜರುಪಡಿಸುವ ಸಾಧ್ಯತೆ ಇದೆ.
ಚಿದಂಬರಂ ಅವರನ್ನು ಚಿಕಿತ್ಸೆಗಾಗಿ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಅವರು ಕ್ರೋನ್ಸ್ ಕಾಯಿಲೆಯಿಂದ ಬಳಲುತ್ತಿರುವುದರಿಂದ ಅವರಿಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ಅಗತ್ಯ ಇದೆ ಮೂಲಗಳು ತಿಳಿಸಿವೆ.