ಬೆಂಗಳೂರು, ಅ.31(Daijiworld News/SS): ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಮೂರು ತಿಂಗಳಲ್ಲಿ ಸಕಾಷ್ಟು ಅಧಿಕಾರಿಗಳ ವರ್ಗಾವಣೆಯಾಗಿದೆ. ಇದರಲ್ಲಿ ಕೇಂದ್ರ ನಾಯಕರು ಹಸ್ತಕ್ಷೇಪ ಮಾಡಿಲ್ಲ. ಆಡಳಿತಾತ್ಮಕ ದೃಷ್ಟಿಯಿಂದ ಕೆಲವು ಅಧಿಕಾರಿಗಳನ್ನು ಬದಲಿಸಲಾಗಿದೆ. ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಲು ಶಕ್ತಿ ಮೀರಿ ಕೆಲಸ ಮಾಡುತ್ತಿದ್ದು, ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.
ಒಂದೆಡೆ ನೆರೆಯಿಂದಾಗಿರುವ ನಷ್ಟ. ಮತ್ತೊಂದೆಡೆ ಸಾಲಮನ್ನಾದ ಹೊರೆ ಇದ್ದು, ಎರಡನ್ನೂ ನಿಭಾಯಿಸಿಕೊಂಡು ಅಭಿವೃದ್ಧಿಯ ಕಡೆಗೆ ಗಮನ ಹರಿಸಲಾಗಿದೆ. ರಾಜ್ಯದಲ್ಲಿ ಮೂರು ಉಪಮುಖ್ಯಮಂತ್ರಿಗಳ ಸೃಷ್ಠಿ ಮಾಡಿರುವುದು ಕೇಂದ್ರ ನಾಯಕರ ತೀರ್ಮಾನವಾಗಿದೆ. ಇದರಲ್ಲಿ ಯಾವುದೇ ತಪ್ಪು ಇದೆ ಎಂದು ಅನಿಸುತ್ತಿಲ್ಲ ಎಂದು ಹೇಳಿದರು.
ಇದೇ ವೇಳೆ ಲಿಂಗಾಯಿತರು ಯಡಿಯೂರಪ್ಪ ಜತೆ ಇಲ್ಲ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಎಲ್ಲಾ ವರ್ಗದವರು ನನ್ನ ಜತೆ ಇದ್ದಾರೆ. ಅವರ ಹೇಳಿಕೆ ಸರಿಯಿಲ್ಲ. ಪರಿಶಿಷ್ಟ ಜಾತಿ ಮತ್ತು ವರ್ಗ, ಹಿಂದುಳಿದ ವರ್ಗದವರು ಸೇರಿದಂತೆ ಎಲ್ಲರೂ ಜತೆಗಿದ್ದು, ರಾಜ್ಯದ ಕಲ್ಯಾಣಕ್ಕಾಗಿ ಸರ್ಕಾರ ಹಾಗೂ ತಾವು ಶ್ರಮಿಸಲಾಗುತ್ತಿದೆ. ಮುಂದಿನ ಉಪಚುನಾವಣೆಯಲ್ಲಿ 15 ಕ್ಷೇತ್ರಗಳಲ್ಲಿ ಗೆಲ್ಲಲು ಗಮನ ಹರಿಸಿದ್ದು, 13 ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವು ಖಚಿತ ಎಂದು ಹೇಳಿದರು.