ಬೆಂಗಳೂರು, ನ.01(Daijiworld News/SS): ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿರುವ ಹೊಸ ಸುತ್ತೋಲೆಯೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ.
ಕನ್ನಡ ರಾಜ್ಯೋತ್ಸವದಂದು ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜ ಹಾರಾಟ ಬೇಡ, ಕೇವಲ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಡ್ಡಾಯ ಸೂಚನೆ ಹೊರಡಿಸಿದೆ.
ಕನ್ನಡ ರಾಜ್ಯೋತ್ಸವ ಆಚರಣೆ ವೇಳೆ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಸುತ್ತೋಲೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.