ನವದೆಹಲಿ, ನ.01(Daijiworld News/SS): ರಾಜ್ಯದಲ್ಲೆಡೆ 64ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿ ಶುಭಕೋರಿದ್ದಾರೆ.
ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಶುಭಕೋರಿದ್ದಾರೆ.
ಕನ್ನಡದಲ್ಲೇ ಟ್ವೀಟ್ ಮಾಡಿ ಶುಭಕೋರುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕನ್ನಡ ರಾಜ್ಯೋತ್ಸವದ ಸಂಭ್ರಮವನ್ನು ಹಿಮ್ಮಡಿಗೊಳಿಸಿದ್ದಾರೆ.
ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ನಾಡು, ನುಡಿಗಾಗಿ ಹೋರಾಟ ನಡೆಸಿದ ಮಹನೀಯರನ್ನು ಸ್ಮರಿಸಲಾಗುತ್ತಿದೆ.