ನವದೆಹಲಿ, ನ 02 (Daijiworld News/MSP): ದೆಹಲಿಯ ತೀಸ್ ಹಜಾರಿ ಕೋರ್ಟ್ ಆವರಣದಲ್ಲಿ ಶನಿವಾರ ವಕೀಲರು ಮತ್ತು ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಈ ಘರ್ಷಣೆ ವಿಕೋಪಕ್ಕೆ ತಿರುಗಿದ್ದು, ಘಟನೆಯಲ್ಲಿ ಇಬ್ಬರು ವಕೀಲರು ಗಾಯವಾಗಿದ್ದು, ಪೊಲೀಸ್ ವಾಹನಗಳಿಗೆ ಬೆಂಕಿ ಹಚ್ಚಲಾಗಿದೆ ಎಂದು ತಿಳಿದುಬಂದಿದೆ.
ವಾಹನ ನಿಲುಗಡೆ ವಿಷಯವಾಗಿ ಆರಂಭವಾದ ವಾಗ್ವಾದ ಕೈಕೈ ಮಿಲಾಯಿಸುವ ಹಂತ ತಲುಪಿತು ಎನ್ನಲಾಗಿದೆ. ಪೊಲೀಸರ ನಡೆಸಿದ ಗುಂಡಿನ ದಾಳಿಯಲ್ಲಿ ವಕೀಲರಿಬ್ಬರು ಗಾಯಗೊಂಡಿದ್ದಾರೆ ಎಂದು ವಕೀಲರು ಆರೋಪಿಸಿದ್ದಾರೆ. ಆದರೆ ಇದನ್ನು ತಳ್ಳಿಹಾಕಿರುವ ಪೊಲೀಸರು, ತಾವು ಗುಂಡು ಹಾರಿಸಿಲ್ಲ ಎಂದು ಹೇಳಿದ್ದಾರೆ.
ಪೊಲೀಸರು ಗುಂಡು ಹಾರಿಸಲು ಪ್ರಯತ್ನಿಸಿದ್ದು ಎಂದು ವಕೀಲರು ಆರೋಪಿಸಿದ್ರೆ, ಪೊಲೀಸರು ನಮ್ಮ ಸಿಬ್ಬಂದಿ ಮೇಲೆ ಕೈ ಮಾಡಿದರು ಎಂದು ಆರೋಪಿಸಿದ್ದಾರೆ. ಈ ಘರ್ಷಣೆಯಲ್ಲಿ ಎರಡು ಬಣದ ಹಲವರು ಗಾಯಗೊಂಡಿದ್ದಾರೆ. ಸದ್ಯ ಪರಿಸ್ಥಿತಿ ಉದ್ವಿಗ್ನವಾಗಿದೆ.