ಚಿಕ್ಕಬಳ್ಳಾಪುರ, ನ 03 (DaijiworldNews/SM): ಮಾಜಿ ಪ್ರಧಾನಿ ದೇವೇಗೌಡ ಅವರು ಹಿರಿಯರು. ಅವರ ಹೇಳಿಕೆಗೆ ಯಾವುದೇ ಪ್ರತಿಕ್ರಿಯೆ ಕೊಡುವ ಯೋಚನೆ ಮಾಡಿಲ್ಲ ಎಂದು ಸಿಎಂ ಬಿಎಸ್ ವೈ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಂದರ್ಭ ಮಾಧ್ಯಮಗಳು ದೇವೇಗೌಡ ಅವರ ಹೇಳಿಕೆ ಬಗ್ಗೆ ಪ್ರಶ್ನಿಸಿದರು. ಈ ಸಂದರ್ಭ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ ಬಿಎಸ್ ವೈ, ದೇವೇಗೌಡರು ಹಿರಿಯರು. ಅವರ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ ಎಂದರು.
ಇನ್ನು ಈ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿಯಲ್ಲಿ ರಾಜ್ಯದಲ್ಲಿ ಸರಕಾರ ರಚನೆಗೊಂಡಿತ್ತು. ಆದರೆ, ಮೈತ್ರಿ ಸರಕಾರವನ್ನು ಉರುಳಿಸಲು ಬಿಜೆಪಿ ಇನ್ನಿಲ್ಲದ ಕಸರತ್ತುಗಳನ್ನು ನಡೆಸಿತ್ತು. ಅಂತಿಮವಾಗಿ ಸರಕಾರ ಪತನಗೊಂಡು ಬಿಎಸ್ ವೈ ಮುಖ್ಯಮಂತ್ರಿಗಳಾಗಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದಿದೆ. ಇದೀಗ ನೂರು ದಿನಗಳನ್ನು ಸರಕಾರ ಪೂರೈಸಿದೆ. ಈ ಸಂದರ್ಭದಲ್ಲಿ ದೇವೇಗೌಡ ಅವರು ಬಿಜೆಪಿ ಸರಕಾರವನ್ನು ಟೀಕಿಸಿದ್ದಾರೆ.
ಕೆಟ್ಟ ನಡವಳಿಕೆಗಳಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಎಂದಿದ್ದರು. ಇದಕ್ಕೆ ಸಿಎಂ ಬಿಎಸ್ ವೈ ಪ್ರತಿಕ್ರಿಯೆ ನೀಡಲು ಹಿಂದೇಟು ಹಾಕಿದ್ದಾರೆ.