ನವದೆಹಲಿ, ಅ.12 (DaijiworldNews/AA): ನವದೆಹಲಿಯಲ್ಲಿ ಪ್ರತಿಭಟನೆ ಹಾಗೂ ಧರಣಿಗಳಿಗೆ ಹೆಸರುವಾಸಿಯಾಗಿದ್ದ ಐತಿಹಾಸಿಕ ಜಂತರ್ ಮಂತರ್ನಲ್ಲಿ ಇನ್ಮುಂದೆ ಜಂತರ್ ಮಂತರ್ನಲ್ಲಿ ಯಾವುದೇ ರೀತಿಯ ಧರಣಿ, ಪ್ರತಿಭಟನೆ ಅಥವಾ ಮೆರವಣಿಗೆ ನಡೆಸಲು ಅವಕಾಶವಿರುವುದಿಲ್ಲ.

ಜಂತರ್ ಮಂತರ್ ಸ್ಥಳವನ್ನು ಪ್ರತಿಭಟನಾ ತಾಣಗಳ ಪಟ್ಟಿಯಿಂದ ಅಧಿಕೃತವಾಗಿ ರದ್ದುಗೊಳಿಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವಾಲಯ ರಚಿಸಿದ್ದ ಸಮಿತಿಯ ಶಿಫಾರಸಿನ ಮೇರೆಗೆ ದೆಹಲಿ ಪೊಲೀಸ್ ಕಮಿಷನರ್ ಕಚೇರಿಯು ಅಧಿಕೃತ ಆದೇಶ ಹೊರಡಿಸಿದೆ.
ಪ್ರತಿಭಟನೆ ನಡೆಸಲು ಅನುಕೂಲವಾಗುವಂತೆ ಸಮಿತಿಯ ಶಿಫಾರಸಿನ ಮೇರೆಗೆ ಮೂರು ಪರ್ಯಾಯ ಮೈದಾನಗಳನ್ನು ನೂತನವಾಗಿ ನಿಗದಿಪಡಿಸಲಾಗಿದೆ. ರಾಮಲೀಲಾ ಮೈದಾನ, ಬುರಾರಿ ಮೈದಾನ, ಪೂರ್ವ ದೆಹಲಿಯ ಸಿಬಿಡಿ ಮೈದಾನದಲ್ಲಿ ಪ್ರತಿಭಟನೆ ನಡೆಸಲು ನಿಗದಿ ಮಾಡಲಾಗಿದೆ.