ಬೆಂಗಳೂರು, ಅ.12 (DaijiworldNews/AK): ಸಿಎಂ ಡಿಕೆ ಶಿವಕುಮಾರ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆಯ ಫಲಾನುಭವಿಗಳಿಗೆ ಈಗ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ.

ರಾಜ್ಯ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ತಮ್ಮ ದಾಖಲೆಗಳನ್ನು ಪರಿಶೀಲಿಸಿಕೊಳ್ಳಲು ಮತ್ತೊಂದು ತಿಂಗಳ ಕಾಲಾವಕಾಶ ನೀಡಲಾಗಿದೆ.
ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯುತ್ತಿರುವ ಮನೆ ಮಾಲೀಕರು ಮತ್ತು ಬಾಡಿಗೆದಾರರ ದಾಖಲೆಗಳ ಮರುಪರಿಶೀಲನೆ ಪ್ರಕ್ರಿಯೆಗೆ ಕರ್ನಾಟಕ ಸರ್ಕಾರವು ಮತ್ತೆ ಒಂದು ತಿಂಗಳ ಕಾಲಾವಕಾಶವನ್ನು ವಿಸ್ತರಿಸಿದ್ದು, ಕೊನೆಯ ದಿನಾಂಕವನ್ನು ಅಕ್ಟೋಬರ್ 31, 2026 ರವರೆಗೆ ನಿಗದಿಪಡಿಸಿದೆ.
ಗೃಹಜ್ಯೋತಿ ಫಲಾನುಭವಿಗಳ ಮರುಪರಿಶೀಲನೆಗೆ ನೀಡಲಾಗಿದ್ದ ಗಡುವನ್ನು ವಿಸ್ತರಿಸಲಾಗಿದ್ದು, ಈಗ ಅಕ್ಟೋಬರ್ 31ರೊಳಗೆ ಪರಿಶೀಲನೆ ಹಾಗೂ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಪೂರ್ಣಗೊಳಿಸಲು ಸೂಚಿಸಲಾಗಿದೆ. ಯೋಜನೆಯ ಪ್ರಯೋಜನ ಅರ್ಹ ಕುಟುಂಬಗಳಿಗೆ ತಲುಪಬೇಕು ಎಂಬ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ
ಆ ಮೂಲಕ ಗೃಹಜ್ಯೋತಿ ಸೌಲಭ್ಯ ಪಡೆಯಲು ಮತ್ತೊಂದು ಅವಕಾಶ ನೀಡಲಾಗಿದ್ದು, ಡಾಕ್ಯುಮೆಂಟ್ ವೆರಿಫಿಕೇಶನ್ಗೆ ಅಕ್ಟೋಬರ್ ಕೊನೆಯವರೆಗೆ ಕಾಲಾವಕಾಶ ಕೊಡಲಾಗಿದೆ. ಬೀಗ ಹಾಕಿದ ಮನೆಗಳ ಮಾಲೀಕರಿಗೆ ಸರಕಾರ ರಿಲೀಫ್ ನೀಡಿದ್ದು, ಗೃಹಜ್ಯೋತಿ ದಾಖಲೆ ಸಲ್ಲಿಕೆಗೆ ಅಕ್ಟೋಬರ್ 31ರವರೆಗೆ ಅವಕಾಶ ನೀಡಲಾಗಿದೆ.
ಈ ಹಿಂದೆ ಮನೆ ಮನೆ ಸಮೀಕ್ಷೆಯ ಅಂತಿಮ ಗಡುವು ಸೆಪ್ಟೆಂಬರ್ 30ಕ್ಕೆ ನಿಗದಿ ಮಾಡಲಾಗಿತ್ತು, ಆದರೆ ಇನ್ನೂ ಕೆಲ ಕಡೆಗಳಲ್ಲಿ ಎಸ್ಕಾಂಗಳ ವ್ಯಾಪ್ತಿಯಲ್ಲಿ ಪರಿಶೀಲನೆ ಬಾಕಿ ಇದ್ದು, ಹೀಗಾಗಿ ಗೃಹಜ್ಯೋತಿ ಮರುಪರಿಶೀಲನೆ ಸಮೀಕ್ಷೆ ಮತ್ತೆ ವಿಸ್ತರಣೆ ಮಾಡಲಾಗಿದೆ.