ಬೆಂಗಳೂರು, ನ.05(Daijiworld News/SS): ಅರಬ್ಬಿ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತ ಉಂಟಾಗಿದ್ದು, ಮತ್ತೆ ರಾಜ್ಯದಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ನವೆಂಬರ್ 6ರಂದು ಗುಜರಾತ್, ಕೇರಳ, ತಮಿಳುನಾಡು ಸೇರಿದಂತೆ ಕರ್ನಾಟಕದ ಕೆಲ ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆ ಕೇರಳ, ಗುಜರಾತ್ ಸೇರಿದಂತೆ ಕರ್ನಾಟಕದ ಕೆಲ ಭಾಗಗಳಿಗೆ ಹೈ ಅಲರ್ಟ್ ಘೋಷಿಸಲಾಗಿದೆ.
ಕೇರಳದ ನಾಲ್ಕು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಕೇರಳದ ಎರ್ನಾಕುಲಮ್, ತ್ರಿಶೂರ್, ಮಲಪ್ಪುರಂ ಹಾಗೂ ಕೋಳಿಕ್ಕೊಡ್ನಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಲ್ಲಿ 6 ಸೆಂ.ಮೀನಿಂದ 20 ಸೆಂ.ಮೀವರೆಗೆ ಮಳೆಯಾಗುವ ನಿರೀಕ್ಷೆ ಇದೆ. ಉಳಿದ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಗುಜರಾತ್ನಲ್ಲಿ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ ಎನ್ನಲಾಗಿದೆ. ಮಹಾ ಚಂಡಮಾರುತ ಪೂರ್ವ-ಈಶಾನ್ಯ ದಿಕ್ಕಿನಲ್ಲಿ ದಕ್ಷಿಣ ಗುಜರಾತ್ ಕರಾವಳಿಯ ಕಡೆಗೆ ಮರು ತಿರುವು ತೆಗೆದುಕೊಳ್ಳುತ್ತದೆ. ಈ ಹಿನ್ನಲೆ, ನವೆಂಬರ್ 6ರಿಂದ ಗುಜರಾತಿನಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿದುಬಂದಿದೆ.